ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ: ಹೈಕೋರ್ಟ್ ಆದೇಶ.

ಬೆಂಗಳೂರು,ಏಪ್ರಿಲ್,6,2024 (www.justkannada.in):  ಲೋಕಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು ಈ ಮಧ್ಯೆ  ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶಿಸಿದೆ.

ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಫಾರ್ಮಸಿ ಅಧಿಕಾರಿಗಳಿಗೆ ಬಿಬಿಎಂಪಿ ಆದೇಶ ನೀಡಿತ್ತು. ಇದೀಗ ಹೈಕೋರ್ಟ್,   ಬಿಬಿಎಂಪಿಯ ಈ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.  ಈ ಮೂಲಕ ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ರಿಲೀಫ್ ಸಿಕ್ಕಿದೆ.

ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸುವಾಗ ಕಾನೂನು ಪಾಲಿಸಬೇಕು ಎಂದು ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಯ  ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದೆ. 2ನೇ ಹಂತದ ಮತದಾನ ಮೇ 7 ರಂದು ನಡೆಯಲಿದ್ದು ಜೂನ್ 4 ರಂದು ಫಲಿತಾಂಶ ಹೊರ ಬೀಳಲಿದೆ.

Key words:  ElectionDuty,  Pharmacy Officers, High Court