ಚುನಾವಣಾ ಬಾಂಡ್ ಗಳು  ಅಸಂವಿಧಾನಿಕ- ಸುಪ್ರೀಂಕೋರ್ಟ್ ಮಹತ್ವದ ತೀರ್ಪು.

ನವದೆಹಲಿ,ಫೆಬ್ರವರಿ,15,2024(www.justkannada.in): ಚುನಾವಣಾ ಬಾಂಡ್ ಗಳು  ಅಸಂವಿಧಾನಿಕವಾದದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಈ ಮೂಲಕ  ಚುನಾವಣಾ ಬಾಂಡ್ ಗಳನ್ನ ನಿಷೇಧಿಸಿದೆ.

ಚುನಾವಣಾ ಬಾಂಡ್​ ಯೋಜನೆಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಇಂದು ತೀರ್ಪು ನೀಡಿದೆ. ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್​ ಗಳನ್ನು ನಿಷೇಧಿಸಿದೆ. ಸುಪ್ರೀಂ ಕೋರ್ಟ್ ಇದನ್ನು ಅಸಂವಿಧಾನಿಕ ಎಂದು ಕರೆದಿದೆ ಮತ್ತು ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರವನ್ನು ಕೇಳಿದೆ.

ಚುನಾವಣಾ ಬಾಂಡ್ ಯೋಜನೆಯನ್ನು ಟೀಕಿಸಿದ ಸುಪ್ರೀಂ ಕೋರ್ಟ್, ರಾಜಕೀಯ ಪಕ್ಷಗಳು ಪಡೆಯುತ್ತಿರುವ ಹಣದ ಬಗ್ಗೆ ಮಾಹಿತಿ ಪಡೆಯುವುದು ಬಹಳ ಮುಖ್ಯ ಎಂದು ಹೇಳಿದೆ. ಚುನಾವಣಾ ಬಾಂಡ್‌ ಗಳು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ತಿಳಿಸಿದೆ.

ಭಾರತದ ಯಾವುದೇ ನಾಗರಿಕ ಅಥವಾ ದೇಶದಲ್ಲಿ ಸ್ಥಾಪಿಸಲಾದ ಯಾವುದೇ ಘಟಕದಿಂದ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು. ಯಾವುದೇ ವ್ಯಕ್ತಿ ಏಕಾಂಗಿಯಾಗಿ ಅಥವಾ ಇತರ ವ್ಯಕ್ತಿಗಳ ಸಹಯೋಗದಲ್ಲಿ ಚುನಾವಣಾ ಬಾಂಡ್‌ ಗಳನ್ನು ಖರೀದಿಸಬಹುದು.

Key words: Electoral Bonds -Unconstitutional- Supreme Court -verdict.