ಶಾಲಾ ಕ್ರೀಡಾಕೂಟ ವೇಳೆ ವಿದ್ಯುತ್ ಅವಘಡ: ಓರ್ವ ಸಾವು: 10 ಜನರಿಗೆ ಗಾಯ

0
1

ಚಿಕ್ಕಬಳ್ಳಾಫುರ, ಫೆಬ್ರವರಿ,10,2024(www.justkannada.in):   ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿ, 10 ಮಂದಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದ ಶಾರದಾ ಶಾಲೆಯಲ್ಲಿ ನಡೆದಿದೆ.

ನಾಗೇನಹಳ್ಳಿಯ ನಿವಾಸಿ ರಾಘವೇಂದ್ರ ಮೃತಪಟ್ಟವರು ಎಂದು ಗುರುತಿಸಲಾಗಿದೆ.  ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶವಾಗಿದ್ದು,  ಇದರಿಂದ ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪಸರಿಸಿದೆ.

ಘಟನೆಯಲ್ಲಿ ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಮೃತಪಟ್ಟಿದ್ದು, 10ಕ್ಕೂ  ಹೆಚ್ಚು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Electrical shock- school sports –event-One dead