ವಿದ್ಯುತ್ ದರ ಹೆಚ್ಚಳ ವಿಚಾರ: ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  ವಾಗ್ದಾಳಿ.

ಬೆಳಗಾವಿ,ಜೂನ್,5,2023(www.justkannada.in): ವಿದ್ಯುತ್ ದರ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರದ ವಿರುದ್ಧ  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಒಂದು ಕಡೆ ಷರತ್ತು ವಿಧಿಸಿ 200 ಯುನಿಟ್ ವಿದ್ಯುತ್ ಉಚಿತ ನೀಡಿ, ಇನ್ನೊಂದೆಡೆ ವಿದ್ಯುತ್ ದರ ಏರಿಕೆ ಮಾಡುತ್ತಿದೆ.  ಈ ಹಿಂದೆಯೂ ಕಾಂಗ್ರೆಸ್​ ನವರು ಹೆಸ್ಕಾಂ ಮೇಲೆ ದೊಡ್ಡ ಹೊರೆ ಹಾಕಿದ್ದರು. ಒಟ್ಟು ಬಿಲ್ ​​ನಲ್ಲಿ 50 ಪರ್ಸೆಮಟ್​​​ ಬಿಲ್ ಸರ್ಕಾರದಿಂದ ಬರುತ್ತದೆ. ಹಳೇ ಬಾಕಿ ಅಂತಾ ಪುಕ್ಕಟೆ ಹೊರಯನ್ನು ಜನರ ಮೇಲೆ ಹಾಕಿದ್ದರು ಎಂದು ಕಿಡಿಕಾರಿದರು.

ಕಾಂಗ್ರೆಸ್​ ನವರು ರಾಜ್ಯದ ಜನರನ್ನು ಸಂಕಷ್ಟದಲ್ಲಿ ಸಿಲುಕಿಸುತ್ತಿದ್ದಾರೆ. ಎಷ್ಟು ವಿದ್ಯುತ್ ಬಳಕೆ ಮಾಡಬೇಕೆಂಬ ಅಧಿಕಾರ ಪ್ರತಿ ಪ್ರಜೆಗಿದೆ. ಇವರು ಸರಾಸರಿ ಲೆಕ್ಕದಲ್ಲಿ ಗ್ರಾಹಕರು ಬಳಸುವ ವಿದ್ಯುತ್ ಮೇಲೂ ಹಿಡಿತ ಸಾಧಿಸುತ್ತಿದ್ದಾರೆ ಎಂದು ಹರಿಹಾಯ್ದರು.

ನಾನು ಸಿಎಂ ಆಗಿದ್ದಾಗ ದೊಡ್ಡ ಪ್ರಮಾಣದ ಅನುದಾನ ನೀಡಿದ್ದೆ. 13 ಸಾವಿರ ಕೋಟಿ ರೂಪಾಯಿ ನೀಡಿ ಅದಕ್ಕೆ ಪುನಶ್ಚೇತನ ನೀಡಿದ್ದೆವು. ಕಾಂಗ್ರೆಸ್ ಪಕ್ಷಕ್ಕೆ ಇದು ಗೊತ್ತಿಲ್ಲ ಅಂತೇನಿಲ್ಲ. ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವುದನ್ನ ಮಾಡುತ್ತಿದೆ ಎಂದು ಗುಡುಗಿದರು.

Key words: Electricity –rate- hike-Former CM-Basavaraja Bommai-government.