Friday, July 31, 2026

BDA Apartments

Home Front Page ‘ನವರಾತ್ರಿಗೆ ಕರೆಂಟ್ ಶಾಕ್’: ವಿದ್ಯುತ್ ದರ ಏರಿಕೆಗೆ ಮಾಜಿ ಸಿಎಂ ಹೆಚ್.ಡಿಕೆ ಕಿಡಿ..

‘ನವರಾತ್ರಿಗೆ ಕರೆಂಟ್ ಶಾಕ್’: ವಿದ್ಯುತ್ ದರ ಏರಿಕೆಗೆ ಮಾಜಿ ಸಿಎಂ ಹೆಚ್.ಡಿಕೆ ಕಿಡಿ..

ಬೆಂಗಳೂರು,ಸೆಪ್ಟಂಬರ್,24,2022(www.justkannada.in):  ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ದರ ಏರಿಕೆಯ ಶಾಕ್ ನೀಡಿದ್ದು, ಅಕ್ಟೋಬರ್ 1 ರಿಂದ ವಿದ್ಯುತ್ ದರ ಏರಿಕೆಗೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ನವರಾತ್ರಿಗೆ ಕರೆಂಟ್ ಶಾಕ್ ಎಂದು ಹೇಳುವ ಮೂಲಕ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,   ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ @BJP4Karnataka ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಟೀಕಿಸಿದ್ದಾರೆ

ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ ಎಂದು ಸರ್ಕಾರದ ವಿರುದ್ಧ ಹೆಚ್.ಡಿಕೆ ಗುಡುಗಿದ್ದಾರೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ.

ರಾಜ್ಯ  ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಎನ್ ಡಿಎ ಸರಕಾರದ ಹಾದಿಯಲ್ಲೇ ರಾಜ್ಯ  ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ.

ವಿದ್ಯುತ್‌ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ  ಬಿಜೆಪಿ ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Key words: Electricity –rate- hike – state-former CM-HDK -against – government.