ಮಳವಳ್ಳಿ ತಾಲೂಕಲ್ಲಿ ವಿದ್ಯುತ್ ಸ್ಪರ್ಶದಿಂದ ಗಂಡಾನೆ ಸಾವು

ಮಂಡ್ಯ, ಡಿಸೆಂಬರ್ 12, 2019 (www.justkannada.in): ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವಿಗೀಡಾಗಿರುವ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಮ್ಮ ಎಂಬುವರ ಜಮೀನಿಗೆ ಹಾಕಲಾಗಿದ್ದ ವಿದ್ಯುತ್ ಬೇಲಿಗೆ ಸ್ವರ್ಶವಾಗಿ ಘಟನೆ ಸಂಭವಿಸಿದೆ. ಘಟನೆಯಲ್ಲಿ 6 ವರ್ಷದ ಗಂಡು ಆನೆ ಸಾವಿಗೀಡಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ದಾಖಲಾಗಿದೆ.