ರಾಮನಗರ,ಡಿಸೆಂಬರ್,24,2025 (www.justkannada.in): ಕಾಡಾನೆ ಮೊರಾರ್ಜಿ ದೇಸಾಯಿ ಶಾಲೆಯ ಆವರಣಕ್ಕೆ ನುಗ್ಗಿದ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿಯಲ್ಲಿ ನಡೆದಿದೆ.
ಕಾವೇರಿ ವನ್ಯಜೀವಿಧಾಮದ ಕಡೆಯಿಂದ ಬಂದಿರುವ ಒಂಟಿಸಲಗ ದೊಡ್ಡಆಲಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣಕ್ಕೆ ನುಗ್ಗಿದೆ. ಶಾಲೆ ಆನೆಯನ್ನು ಕಂಡ ಶಾಲೆ ಸಿಬ್ಬಂದಿ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾಡಾನೆಯನ್ನ ನೋಡಿದ ವಿದ್ಯಾರ್ಥಿಗಳು ಆತಂಕಗೊಂಡಿರು.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿ, ಆನೆಯನ್ನು ಶಾಲಾ ಆವರಣದಿಂದ ಹೊರಕ್ಕೆ ಹೋಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ, ಕಾರ್ಯಾಚರಣೆ ಮೂಲಕ ಅರಣ್ಯಕ್ಕೆ ಓಡಿಸಿದ್ದಾರೆ ಎನ್ನಲಾಗಿದೆ.
Key words: Elephant, Morarji Desai School, Students







