ಬೆಂಗಳೂರು, ನ.೧೩,೨೦೨೫: ಕರ್ನಾಟಕ ಗಂಧದಗುಡಿ ಜತೆಗೆ ವನ್ಯಜೀವಿಗಳ ಆವಾಸ ಸ್ಥಾನ. ಇಲ್ಲಿನ ವನ್ಯಜೀವಿಗಳು ದೇಶದಲ್ಲೇ ವಿಶಿಷ್ಟ. ಅನನ್ಯ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ಮಾನವ ಮತ್ತು ವನ್ಯ ಜೀವಿಗಳ ಸಂಘರ್ಷ ಹಾಗೂ ನಿಯಂತ್ರಣ ಕುರಿತಾದ ಸಭೆಯಲ್ಲಿ ಕೆಲ ಮಹತ್ವದ ವಿಷಯಗಳು ಬೆಳಕಿಗೆ ಬಂದವು. ಅವು ಹೀಗಿವೆ..
ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 6395 ಇದ್ದು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ . ಹುಲಿ ಸಂಖ್ಯೆ 563 ಇದ್ದು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಹಾಗೂ 1879 ಚಿರತೆಗಳಿದ್ದು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.
ವನ್ಯಜೀವಿ ಹಾವಳಿಯಿಂದ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2022-23ರಲ್ಲಿ 57, 2023-24ರಲ್ಲಿ 65, 2024-25ರಲ್ಲಿ 46, 2025-26ರಲ್ಲಿ 32 ಮಾನವ ಜೀವ ಹಾನಿ ಸಂಭವಿಸಿದೆ.
ಚಾಮರಾಜನಗರ, ಕೊಡಗು, ಹಾಸನ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಾನವ ಪ್ರಾಣ ಹಾನಿ ಪ್ರಕರಣಗಳು ಸಂಭವಿಸಿದೆ.
ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ 2024-25 ರಲ್ಲಿ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ 30% ಕಡಿತವಾಗಿದೆ.

ವನ್ಯಜೀವಿಗಳು ಆಹಾರ ಹುಡುಕಿಕೊಂಡು ಹೊರಗೆ ಬರುವುದನ್ನು ನಿಗ್ರಹಿಸಬೇಕು. ಬೇಸಿಗೆಯ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು
ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ ಲಾಂಟಾನ ಕಳೆ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವನ್ಯಪ್ರಾಣಿಗಳ ಮೇವಿಗೆ ಕೊರತೆ ಉಂಟಾಗುತ್ತದೆ.
ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನರೇಂದ್ರ ಸ್ವಾಮಿ, ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
key words: Karnataka, has the highest number, elephants, tigers, leopards

SUMMARY:

Karnataka has the highest number of elephants at 6395, the second highest number of tigers at 563, and the third highest number of leopards at 1879.







