ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ: ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡಿದ ನಟ ಶಿವಣ್ಣ ದಂಪತಿ

ಶಿವಮೊಗ್ಗ,ಜುಲೈ ,8,2024 (www.justkannada.in):  ಹಾವೇರಿ ಜಿಲ್ಲೆ ಬ್ಯಾಡಗಿ ಬಳಿ ಇತ್ತೀಚೆಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬವನ್ನ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿ ಮಾಡಿ ಸಾಂತ್ವನ ಹೇಳಿ ತಲಾ 1ಲಕ್ಷ ರೂ. ಪರಿಹಾರ ನೀಡಿದರು.

ಇತ್ತೀಚಿಗೆ ಭದ್ರಾವತಿಯ ಎಮ್ಮೆಹಟ್ಟಿ ಗ್ರಾಮದ 13 ಮಂದಿ ಹಾವೇರಿ ಜಿಲ್ಲೆ ಬ್ಯಾಡಗಿ ಸಂಭಿವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದರು.  ರೇಣುಕಾಯಲ್ಲಮ್ಮ ದೇವರ ದರ್ಶನ ಪಡೆದು ಟಿಟಿ ವಾಹನದಲ್ಲಿ ವಾಪಸ್ ಆಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ 13 ಮಂದಿ ಸಾವನ್ನಪ್ಪಿದ್ದರು.

ಇಂದು ನಟ ಶಿವಣ್ಣ ದಂಪತಿ ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ.  ಹಣ ನೀಡಿದರು. ಶಿವಣ್ಣ ದಂಪತಿಗೆ ಭದ್ರಾವತಿ ಶಾಸಕ ಸಂಗಮೇಶ್ ಸಾಥ್ ನೀಡಿದರು.

Key words: Emmehatti village,  Actor Shivanna, visit, compensation