ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್:  ವರ್ಷಕ್ಕೆ 12 ಮುಟ್ಟಿನ ರಜೆ: ಕಾರ್ಮಿಕ ಇಲಾಖೆ ಆದೇಶ

ಬೆಂಗಳೂರು,ನವೆಂಬರ್,13,2025 (www.justkannada.in): ಉದ್ಯೋಗಸ್ಥ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು  ಋತುಚಕ್ರದ ವೇಳೆ ಮಾಸಿಕ ವೇತನ ಸಹಿತ  ವರ್ಷಕ್ಕೆ 12 ರಜೆ ನೀಡುವಂತೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು ವೇತನ ಸಹಿತ ನೀಡುವಂತೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಯಡಿ ನೋಂದಣಿಯಾಗಿರುವ ಸರ್ಕಾರಿ ಹಾಗೂ ಖಾಸಗಿ ಕಂಪೆನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಮಹಿಳಾ ಉದ್ಯೋಗಿಗಳಿಗೂ ಇದು ಅನ್ವಯವಾಗಲಿದೆ. ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18ರಿಂದ 52 ವರ್ಷದ ವಯೋಮಿತಿಯ ಎಲ್ಲ ಖಾಯಂ ಆಥವಾ ಗುತ್ತಿಗೆ ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸುವಂತೆ ಸೂಚನೆ ನೀಡಲಾಗಿದೆ.

Key words: employed women, 12 menstrual leaves, per year, Labor Department