ರಾಜ್ಯದ ನೆರೆ ಪರಿಹಾರ ಸಂಬಂಧ ಭೇಟಿ ಅಂತ್ಯ: ಪ್ರಧಾನಿ ಮೋದಿ ಕೊಟ್ಟ ಭರವಸೆಗಳ ಕುರಿತು ಮಾಹಿತಿ ನೀಡಿದ ಸಿಎಂ ಬಿ.ಎಸ್ ಯಡಿಯೂರಪ್ಪ…

ನವದೆಹಲಿ,ಆ,16,2019(www.justkannada.in):  ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದಿದ್ದು ಶೀಘ್ರವೇ ಪರಿಹಾರ ಬಿಡುಗಡೆ ಭರವಸೆ ನೀಡಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಸುಮಾರು 40 ನಿಮಿಷಗಳ ಕಾಲ ರಾಜ್ಯದ ನೆರೆ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಶಾಸಕರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್ ಸಾಥ್ ನೀಡಿದರು.

ಪ್ರಧಾನಿ ಮೋದಿ ಭೇಟಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಈ ವೇಳೆ ರಾಜ್ಯಕ್ಕೆ ತಕ್ಷಣ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಪ್ರಧಾನಿ ಮೋದಿ ಅವರು ರಾಜ್ಯದಕ್ಕೆ ಅಧಿಕಾರಿಗಳ ತಂಡ ಕಳುಹಿಸಿಕೊಡಲು ತೀರ್ಮಾನಿಸಿದ್ದಾರೆ. ಮಧ್ಯಂತರ ಪರಿಹಾರ ಬಿಡುಗಡೆ ಮಾಡಲು ನಿರ್ಧರಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಧಾರಾಕಾರ ಮಳೆ ಮತ್ತು ಪ್ರವಾಹದಿಂದ 40  ಸಾವಿರ ಕೋಟಿಗೂ ಹೆಚ್ಚು ನಷ್ಟ ಆಗಿದೆ. ಮಹಾಮಳೆಯಿಂದ ಜಲಾಶಯಗಳು ತುಂಬಿದೆ. ರಸ್ತೆ ಸೇತುವೆ ಮನೆಗಳು ಹಾನಿಯಾಗಿವೆ. ಹೀಗಾಗಿ ತಕ್ಷಣ ಪರಿಹಾರ ಬಿಡುಗಡೆಗೆ ಪ್ರಧಾನಿ ಮೋದಿ ಬಳಿ ಮನವಿ ಮಾಡಿದ್ದೇವೆ ಎಂದರು.

Key words: End –meeting- cm bs yeddyurappa- pm modi- Flood relief