Tuesday, September 22, 2026

BDA Apartments

ಮೈಸೂರು ನಗರದಲ್ಲಿ 144 ಸೆಕ್ಷನ್ ಜಾರಿ: ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ BDA JK_Adv BDA Adv
Home Front Page ಮೈಸೂರು ನಗರದಲ್ಲಿ 144 ಸೆಕ್ಷನ್ ಜಾರಿ: ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ.

ಮೈಸೂರು ನಗರದಲ್ಲಿ 144 ಸೆಕ್ಷನ್ ಜಾರಿ: ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ.

ಮೈಸೂರು,ಅಕ್ಟೋಬರ್,13,2023(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷಾ ದಸರಾ ವಿವಾದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಟೌನ್ ಹಾಲ್ ನಲ್ಲಿ ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಿ ಪೊಲೀಸರು ಆದೇಶಿಸಿದ್ದಾರೆ. ಇನ್ನು  ಪುರಭವನ ಹಾಲ್ ಹೊರತುಪಡಿಸಿ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. 14 ರ ಬೆಳಗ್ಗೆ 06 ಗಂಟೆಯವರೆಗೆ 144 ಸೆಕ್ಷನ್ ಅನ್ವಯವಾಗಲಿದೆ.ಮೈಸೂರು ನಗರದಲ್ಲಿ 144 ಸೆಕ್ಷನ್ ಜಾರಿ mysore

ಯಾವುದೇ ಸಭೆ ಸಮಾರಂಭ, ರ್ಯಾಲಿ ಹಾಗೂ ಮೆರವಣಿಗೆ ನಡೆಸದಂತೆ ನಿಷೇಧ ಹೇರಲಾಗಿದೆ. ಪರ ವಿರೋಧ ಘೋಷಣೆ ಕೂಗುವುದಕ್ಕೆ ನಿರ್ಬಂಧಿಸಲಾಗಿದೆ. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದಕ್ಕೆ ಬ್ರೇಕ್ ಹಾಕಲಾಗಿದೆ. 5 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವಂತಿಲ್ಲ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Key words: Enforcement – Section 144 – Mysore City- Chamundi hill-mahisha dasara