Tuesday, September 15, 2026

BDA Apartments

Government BDA JK_Adv BDA Adv
Home Front Page ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in):  “ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ  ಸಿಎಂ ಡಿಕೆ ಶಿವಕುಮಾರ್ ಅವರು ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.Government dks dks 4

“ಸರ್ಕಾರ ವತಿಯಿಂದ ಇಂಜಿನಿಯರ್ ದಿನ ಆಚರಿಸುವ ಪ್ರಸ್ತಾವನೆ ನೀಡಿದ್ದು, ನಾನು ಅದಕ್ಕೆ ಸಮ್ಮತಿ ಸೂಚಿಸಿದ್ದೇನೆ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ 1 ಲಕ್ಷಕ್ಕೂ ಹೆಚ್ಚು ತಯಾರು ಮಾಡುತ್ತಿದೆ. ಭಾರತದಲ್ಲಿ ಅತಿ ಹೆಚ್ಚು ಇಂಜಿನಿಯರ್ ಇದ್ದು, ಅವರನ್ನು ಗುರುತಿಸುವುದು ನಮ್ಮ ಕರ್ತವ್ಯ. ಎಲ್ಲಾ ಇಂಜಿನಿಯರ್ ಗಳು ರಾಜ್ಯದ ಉದ್ದಗಲ ಗಮನಿಸಬೇಕು. ಇದರ ರೂಪುರೇಷೆಗಳನ್ನು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.celebrate dks1 dks1 3

ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು

“ಇಂದು ಇಂಜಿನಿಯರ್ ಗಳ ದಿನವಾಗಿದ್ದು, ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ಸರ್ಕಾರದ ಪರವಾಗಿ ಮಾಲಾರ್ಪಣೆ ಮಾಡಲಾಗಿದೆ. ಇಂಜಿನಿಯರ್ ಗಳು ದೇಶದ ಆಸ್ತಿ. ವಿಜ್ಞಾನಿಗಳ ಸಂಶೋಧನೆಗಳನ್ನು ಕಾರ್ಯಗತಗೊಳಿಸುತ್ತಿರುವವರು ಇಂಜಿನಿಯರ್ ಗಳು. ಎಲ್ಲಾ ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು. ವಾಸ್ತುಶಿಲ್ಪದ ಪರಂಪರೆಯಲ್ಲಿ ನಾವು ಇಂಜಿನಿಯರ್ ಗಳನ್ನು ಗುರುತಿಸುತ್ತಿದ್ದೆವು. ಈಗ ಇಂಧನ, ಕಟ್ಟಡ ನಿರ್ಮಾಣ, ಐಟಿ ತಂತ್ರಜ್ಞಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ವಿಶ್ವೇಶ್ವರಯ್ಯ ಅವರು ದೇಶಕ್ಕೆ ಮಾದರಿ. ಕರ್ನಾಟಕಕ್ಕೆ ಅವರ ಕೊಡುಗೆ ಅಪಾರ” ಎಂದು ತಿಳಿಸಿದರು.Engineers' Day jk02_new jk02 new

 

English Summary
Title

Karnataka Govt to Celebrate Engineers' Day Officially, Announces CM D.K. Shivakumar

Short Description
The Karnataka government will officially celebrate Engineers' Day annually starting next year, as announced by Chief Minister D.K. Shivakumar on Tuesday. After paying tribute to the iconic statesman Sir M. Visvesvaraya in Bengaluru, the CM approved a formal proposal to transition the occasion into a state-sponsored event. Highlighting that Karnataka produces over one lakh technical graduates every year—the highest in India—Shivakumar stated it is the government's duty to formally respect and recognise their contributions. While traditionally praised for architecture, their modern impact spans across critical sectors like energy, infrastructure, and IT.
Keywords
Government, celebrate, Engineers' Day, CM, D.K. Shivakumar, announces.