Sunday, August 23, 2026

BDA Apartments

Home Front Page ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ಆಲ್ ರೌಂಡರ್ ಮೋಯಿನ್ ಅಲಿ ನಿವೃತ್ತಿ ಘೋಷಣೆ

ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ಆಲ್ ರೌಂಡರ್ ಮೋಯಿನ್ ಅಲಿ ನಿವೃತ್ತಿ ಘೋಷಣೆ

ಬೆಂಗಳೂರು, ಸೆಪ್ಟೆಂಬರ್ 28, 2021 (www.justkannada.in): ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ಆಲ್ ರೌಂಡರ್ ಮೋಯಿನ್ ಅಲಿ ನಿವೃತ್ತಿ ಘೋಷಿಸಿದ್ದಾರೆ.

ನನಗೆ ಈಗ 34 ವರ್ಷ ವಯಸ್ಸಾಗಿದೆ ಮತ್ತು ನಾನು ಎಷ್ಟು ಸಾಧ್ಯವೋ ಅಷ್ಟು ಆಡಲು ಮತ್ತು ನನ್ನ ಕ್ರಿಕೆಟ್ ಅನ್ನು ಆನಂದಿಸಲು ಬಯಸುತ್ತೇನೆ ಎಂದು ಮೋಯಿನ್ ತಿಳಿಸಿದ್ದಾರೆ.

ಹಲವು ವರ್ಷಗಳಿಂದ ಟೆಸ್ಟ್‌ಗಳಲ್ಲಿ ಇಂಗ್ಲೆಂಡ್‌ನ ಸ್ಪಿನ್ ಬೌಲರ್ ಆಗಿ ಆಡಿರುವ ಮೊಯೀನ್ 2014 ರಲ್ಲಿ ಲಾರ್ಡ್ಸ್‌ನಲ್ಲಿ ಶ್ರೀಲಂಕಾ ವಿರುದ್ಧ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದರು.

ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದರೂ ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ರಾಷ್ಟ್ರೀಯ ತಂಡದಲ್ಲಿ ಆಡುವುದನ್ನು ಮೋಯಿನ್ ಅಲಿ ಮುಂದುವರಿಸುತ್ತಾರೆ. ಈ ವಿಷಯವನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಖಚಿತಪಡಿಸಿದೆ.

key words: England all-rounder Moeen Ali announces his retirement from Test cricket