Friday, September 18, 2026

BDA Apartments

ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಇಂಗ್ಲೆಂಡ್’ನ ಇಯಾನ್ ಮೊ...
Home Front Page ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಇಂಗ್ಲೆಂಡ್’ನ ಇಯಾನ್ ಮೊರ್ಗನ್

ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಇಂಗ್ಲೆಂಡ್’ನ ಇಯಾನ್ ಮೊರ್ಗನ್

ಬೆಂಗಳೂರು, ಜೂನ್ 29, 2022 (www.justkannada.in): ಇಂಗ್ಲೆಂಡ್‌ನ ಇಯಾನ್ ಮೊರ್ಗನ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.

ಹೌದು. ವಿಶ್ವಕಪ್ ವಿಜೇತ ತಂಡದ ನಾಯಕ ಮೊರ್ಗನ್ ಮಂಗಳವಾರ ನಿವೃತ್ತಿಯ ನಿರ್ಧಾರ ಪ್ರಕಟಿಸಿದ್ದಾರೆ.

2019ರಲ್ಲಿ ಇಂಗ್ಲೆಂಡ್ ತಂಡ 50 ಓವರ್‌ಗಳಲ್ಲಿ ವಿಶ್ವಕಪ್ ಗೆಲ್ಲಲು ತಂಡದ ನಾಯಕತ್ವವಹಿಸಿದ್ದ ಮೊರ್ಗನ್ 126 ಏಕದಿನ ಹಾಗೂ 72 ಟ್ವೆಂಟಿ-20 ಪಂದ್ಯಗಳಲ್ಲಿ ಇಂಗ್ಲೆಂಡ್ ನಾಯಕತ್ವವಹಿಸಿದ್ದರು.

35 ರ ಹರೆಯದ ಮೊರ್ಗನ್ ಇಂಗ್ಲೆಂಡ್ ಪರವಾಗಿ ಗರಿಷ್ಠ ಏಕದಿನ ರನ್(6,957 ರನ್), ಗರಿಷ್ಠ ಟ್ವೆಂಟಿ-20 ರನ್(2,458 ರನ್), ಎರಡೂ ಮಾದರಿ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್‌ಗಳನ್ನು ಸಿಡಿಸಿದ ಸಾಧನೆ ಮಾಡಿದ್ದಾರೆ.

ಮೊರ್ಗನ್ 2006ರಲ್ಲಿ 16ನೇ ವಯಸ್ಸಿನಲ್ಲಿ ಐರ್‌ಲ್ಯಾಂಡ್ ಪರ ಚೊಚ್ಚಲ ಪಂದ್ಯವನ್ನಾಡಿದ್ದರು. 2009ರಲ್ಲಿ ಇಂಗ್ಲೆಂಡ್ ಪರ ಆಡುವ ಅವಕಾಶ ಪಡೆದರು.