ಸಚಿವ ಸ್ಥಾನದ ಆಕಾಂಕ್ಷಿಗಳ ಋಣ ನಮ್ಮ ಮೇಲಿದೆ. ಅದನ್ನು ತೀರಿಸುವುದು ನಮ್ಮ ಕರ್ತವ್ಯ : ಸಚಿವ ಕೆ.ಎಸ್ ಈಶ್ವರಪ್ಪ

 

ಮೈಸೂರು, ಜ.19, 2020 : (www.justkannada.in news) : ಕಾಂಗ್ರೆಸ್- ಜೆಡಿಎಸ್ ಅಪವಿತ್ರ ಮೈತ್ರಿ ಸರಕಾರದಿಂದ ರೋಸಿ ರಾಜೀನಾಮೆ ನೀಡಿದ ಶಾಸಕರ ಸಲುವಾಗಿಯೇ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಆದ್ದರಿಂದ ಅವರ ಋಣ ತೀರಿಸುವ ಕೆಲಸ ನಾವು ಮಾಡುತ್ತೇವೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾನುವಾರ ಮೈಸೂರಿಗೆ ಆಗಮಿಸಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಮಾಧ್ಯಮದ ಜತೆ ಮಾತನಾಡಿದರು.

ಅತೃಪ್ತ ಶಾಸಕರಿಂದಲೇ ನಮ್ಮ ಸರ್ಕಾರ ಬಂದಿದೆ. ಅದು ಸಚಿವರನ್ನಾಗಿ ಮಾಡುವುದು ಅಥವಾ ಸ್ಥಾನ ಕೊಡುವುದಲ್ಲ.
ಅವರ ಋಣವನ್ನು ನಾವು ತೀರಿಸಬೇಕಿದೆ ಅಷ್ಟೇ. ಇನ್ನು ಎರಡು ದಿನದಲ್ಲಿ ಅದು ಆಗಲಿದೆ ಎಂದು ಈಶ್ವರಪ್ಪ ಹೇಳುವ ಮೂಲಕ ಕುತೂಹಲ ಮೂಡಿಸಿದರು.
ಅಮಿತ್ ಶಾ ರಾಜ್ಯ ಪ್ರವಾಸದ ವೇಳೆ ಏನು ಚರ್ಚೆ ಆಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಿಮಗೆ ಇರುವಷ್ಟೇ ಮಾಹಿತಿ ನನಗಿದೆ. ಪೂರ್ಣ ಬಹುಮತ ಬಾರದ ಕಾರಣ ಈ ಗೊಂದಲ. ಆದಷ್ಟು ಬೇಗ ಪೂರ್ಣ ಪ್ರಮಾಣದ ಸಚಿವ ಸಂಪುಟ ಆಗಲಿದೆ.

ಈ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಿ, ಅವರದ್ದು ಅಯೋಗ್ಯ ಸರ್ಕಾರ ಎಂದು ರಾಜ್ಯದ ಜನರು ಮನೆಯಲ್ಲಿ ಕೂರಿಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಜನ ವಿರೋಧಿ ಕೆಲಸ ಮಾಡಿದರು. ಜಾತಿ ಜಾತಿಯನ್ನು ಒಡೆದರು. ಧರ್ಮ ಧರ್ಮದ ನಡುವೆ ಬೆಂಕಿ ಹಚ್ಚಿದರು. ಅದಕ್ಕೆ ಅವರನ್ನು ಜನ ಮನೆಗೆ ಕಳುಹಿಸಿದರು ಎಂದು ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಸಿನಮಾ‌ ಮಾಡಿಕೊಂಡು ಇರಲಿ ಸಾಕು. ಈಶ್ವರಪ್ಪ ಬಗ್ಗೆ ಕುಮಾರಸ್ವಾಮಿ ಟ್ವೀಟ್‌ಗೆ ಮೈಸೂರಿನಲ್ಲಿ ಈಶ್ವರಪ್ಪ ಟಾಂಗ್. ಕುಮಾರಸ್ವಾಮಿ ಸಿಎಂ ಆಗಿದ್ದವರು, ಅವರ ಸ್ಥಾನಕ್ಕೆ ತಕ್ಕಂತೆ ಪದ ಬಳಕೆ ಮಾಡಬೇಕು. ಅಷ್ಟು ಮಾತ್ರ ನಾನು ಹೇಳಬಲ್ಲೆ. ಮೈಸೂರಿನಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ.

ಸಚಿವ ಸ್ಥಾನದ ಆಕಾಂಕ್ಷಿಗಳ ಬಗ್ಗೆ ಬಿಜೆಪಿ ನಾಯಕರ ಟೀಕೆ ವಿಚಾರ. ಟೀಕೆ ಮಾಡುತ್ತಿರುವವರು ಬಾಯಿ ಮುಚ್ಚಿಕೊಂಡಿರಬೇಕು. ಟೀಕೆ ಮಾಡುತ್ತಿರುವವರ ವಿರುದ್ಧ ಈಶ್ವರಪ್ಪ ಆಕ್ರೋಶ. ಅವರ ವಿರುದ್ದ ಹಗುರವಾಗಿ ಮಾತನಾಡುವುದು ಸರಿಯಲ್ಲ. ಅವರಿಂದಲೇ ನಮ್ಮ ಸರ್ಕಾರ ಬಂದಿದೆ.ಮೈಸೂರಿನಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ನಿಷೇಧ ಮಾಡುತ್ತೇವೆ. ಮೈಸೂರಿನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ.
ಎಸ್‌ಡಿಪಿಐ ಹಾಗೂ ಪಿಎಫ್‌ಐ ಭಯೋತ್ಪಾದನಾ ಸಂಘಟನೆಗಳು. ಅವುಗಳ ಚಟುವಟಿಕೆ ಏನು ಎಂಬುದು ಮೈಸೂರು, ಶಿವಮೊಗ್ಗದವರಿಗೂ ಅನುಭವ ಆಗಿದೆ. ಕೇರಳದಿಂದ ಬಂದು ಪಾಕಿಸ್ತಾನಕ್ಕೆ ಜೈ ಎಂದು ಘೋಷಣೆ ಕೂಗಿದ್ದನ್ನು ನೋಡಿದ್ದೇವೆ. ಕೊಲೆ ಮಾಡಿದ ಪ್ರಕರಣಗಳೂ ನಮ್ಮ ಮುಂದಿವೆ. ಇವೆಲ್ಲ ಕಾರಣಗಳನ್ನು ಮುಂದಿಟ್ಟುಕೊಂಡು ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ. ಮೈಸೂರಿನಲ್ಲಿ ಈಶ್ವರಪ್ಪ ಹೇಳಿಕೆ.

 

key words : eshwarappa-mysore-bjp-politics