ಈ ಎರಡು ದಿನ ರಾಜ್ಯದಲ್ಲಿ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ.

ಬೆಂಗಳೂರು,ನವೆಂಬರ್,18,2023(www.justkannada.in): ರಾಜ್ಯದಲ್ಲಿ ಎರಡು ದಿನಗಳು ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತವಾಗಲಿದೆ.

ನವೆಂಬರ್​ 24ರಿಂದ ನವೆಂಬರ್ 26ರವರೆಗೆ ಎಸ್ಕಾಂ ಆನ್​ಲೈನ್​ ಸೇವೆ ಸ್ಥಗಿತಗೊಳ್ಳಲಿದೆ. ನವೆಂಬರ್ 24ರಂದು ಮಧ್ಯಾಹ್ನ 12ರಿಂದ ನವೆಂಬರ್ 26ರ ಬೆಳಗ್ಗೆ 11.59ರವರೆಗೆ ಬಂದ್​ ಆಗಿರಲಿದೆ.

ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. ವಿವಿಧ ಪೋರ್ಟಲ್ ಗಳಲ್ಲಿರುವ ಡಾಟಾವನ್ನು ನೂತನ ಪೋರ್ಟಲ್ ಗೆ ವರ್ಗಾವಣೆ ಮಾಡುವ ಕೆಲಸ ನಡೆಯುವ ಹಿನ್ನೆಲೆ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. 2 ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಸೇವೆ ಇರಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Key words: Eskom –online- service -suspended – state – two days