ಹುಲಿಗೂ ‘ಹಿಡಿದು ಮಾರಿ ಬಿಡುವ ಆತಂಕ’: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು, ಏಪ್ರಿಲ್ 09, 2023 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಕುಹಕವಾಡಿದ್ದಾರೆ.

ಟ್ವಿಟ್ಟರ್ ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಫಾರಿ ವೇಳೆ ಮೋದಿ ಅವರಿಗೆ ಹುಲಿ ದರ್ಶನ ಆಗದ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತ ಸಿದ್ದರಾಮಯ್ಯ ಅವರ ಟ್ವೀಟ್ ಹೀಗಿದೆ…

ಹಿಡಿದು ಮಾರಿಬಿಡುತ್ತಾರೆ ಅನ್ನುವ ಭಯಕ್ಕೆ ಯಾವ ಗುಹೆಯೊಳಗೆ ಅಡಗಿ ಕೂತಿದೆಯೋ.. ಅಯ್ಯೋ ಪಾಪ….!! ಇನ್ನು ಕೆಲವೇ ದಿನಗಳಲ್ಲಿ #SaveBandipur ( ಬಂಡಿಪುರ ಉಳಿಸಿ ) ಎಂಬ ಅಭಿಯಾನವನ್ನು ಕನ್ನಡಿಗರು ಶುರು ಮಾಡುವಂತೆ ಆಗದಿರಲಿ.. ಅದೇ ನೀವು ಕರುನಾಡಿಗೆ ಮಾಡುವ ದೊಡ್ಡ ಉಪಕಾರ

@narendramodi ಜೀ..