“ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಿ” : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮಾರ್ಚ್,25,2021(www.justkannada.in) : ರಾಜ್ಯದ ಯಾವ ಶಾಸಕರೂ ಏಕಪತ್ನಿವ್ರತಸ್ಥರಲ್ಲ ಎಂಬ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.everyone-publicly-clear-marital-relationship-Former CM- Siddaramaiah 

ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧ

ಸಚಿವ ಡಾ.ಕೆ.ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ ಎಂದಿದ್ದಾರೆ.

ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ವಿರೋಧಿಸುವುದಾರೆ, ತನಿಖೆಗಾಗಿ ಪತ್ರ ಬರೆಯಿರಿ

everyone-publicly-clear-marital-relationship-Former CM- Siddaramaiah 

ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ವಿರೋಧಿಸುವುದಾಗಿದ್ದರೆ, ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಯೀಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ ಸಿಎಂ ಬಿ.ಎಸ್.ವೈ ಅವರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ENGLISH SUMMARY….

“Let all of them clarify about their marital status”: Former CM Siddaramaiah demands
Bengaluru, Mar. 25, 2021 (www.justkannada.in): In response to Minister Dr. K. Sudhakar’s recent statement alleging that none of the MLAs are monogamists, former Chief Minister Siddaramaiah today demanded let all the MLAs, including Chief Minister B.S. Yedyurappa and Assembly Speaker Vishweshwar Hegde Kageri give public clarifications about their marital status.
Speaking about the issue today Siddaramaiah explained that as Minister Dr. K. Sudhakar’s statement applies to BJP MLAs also, and if they all agree to it, the State Government should take against them as per Sec.494 and 495 of the Indian Penal Code. Bigamy is a crime as per the Hindu Marriage Act, 1955.
He also mentioned that if the BJP MLAs oppose Minister Sudhakar’s statement let them voluntarily accept my challenge, as all our party MLAs have agreed to do.
Keywords: Former CM Siddaramaiah/ Minister Dr. K. Sudhakar/ Bigamy/ Monogamy

key words : everyone-publicly-clear-marital-relationship-Former CM- Siddaramaiah