Thursday, September 17, 2026

BDA Apartments

ಕೈ ಶಾಸಕಾಂಗ ಪಕ್ಷದ ಸಭೆ ಮುಂದೂಡಿದ ಸಿದ್ದರಾಮಯ್ಯ BDA JK_Adv BDA Adv
Home Front Page ಕೈ ಶಾಸಕಾಂಗ ಪಕ್ಷದ ಸಭೆ ಮುಂದೂಡಿದ ಸಿದ್ದರಾಮಯ್ಯ

ಕೈ ಶಾಸಕಾಂಗ ಪಕ್ಷದ ಸಭೆ ಮುಂದೂಡಿದ ಸಿದ್ದರಾಮಯ್ಯ

ಬೆಂಗಳೂರು, ಜುಲೈ 07, 2019 (www.justkannada.in): ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ನಡೆಸಲು ಉದ್ದೇಶಿಸಿದ್ದ ತುರ್ತು ಶಾಸಕಾಂಗ ಸಭೆ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದೂಡಿದ್ದಾರೆ.

ರಾಜೀನಾಮೆ ನೀಡಿರುವ ಶಾಸಕರ ಮನವೊಲಿಕೆಗೆ ಹೆಚ್ಚಿನ ಒತ್ತು ಕೊಡಬೇಕು. ಜೊತೆಗೆ ಒಂದೆರಡು ದಿನಗಳಲ್ಲಿ ರಾಜೀನಾಮೆ ಕೊಡುವ ಸಾಧ್ಯತೆ ಇರುವ ಶಾಸಕರನ್ನು ಮಾತ್ರ ಮನವೊಲಿಸಿದರೆ ಸಾಕು ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ಬಂದಿದೆ.

ಈ ಹಿನ್ನೆಲೆಯಲ್ಲಿ ತುರ್ತು ಶಾಸಕಾಂಗ ಸಭೆಯನ್ನು ಕರೆಯಲು ಸಿದ್ದರಾಮಯ್ಯ ತೀರ್ಮಾನಿಸಿದ್ದರು. ಆದರೆ ರಾಜೀನಾಮೆ ನೀಡಿ ಮುಂಬೈ ತೆರಳಿರುವ ಕಾಂಗ್ರೆಸ್ ಶಾಸಕರು ಹಾಗೂ ನಗರದಲ್ಲಿರುವ ಶಾಸಕರ ಮನವೊಲಿಕೆ ಯತ್ನ ನಡೆದಿದ್ದು, ಈ ವೇಳೆ ಶಾಸಕಾಂಗ ಸಭೆ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಕಾರಣಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.