Wednesday, October 28, 2026

Dasara Wishes

Happy Dasara
Home Front Page ದಿನಕ್ಕೊಂದು ದೇಶ ಸುತ್ತುವ ಮೋದಿಗೆ ರಾಜ್ಯದ ನೆರೆ ಸಂತ್ರಸ್ತರ ಗೋಳು ಕೇಳುವ ಮಾನವೀಯತೆ ಇಲ್ಲ: ಮಾಸಿ...

ದಿನಕ್ಕೊಂದು ದೇಶ ಸುತ್ತುವ ಮೋದಿಗೆ ರಾಜ್ಯದ ನೆರೆ ಸಂತ್ರಸ್ತರ ಗೋಳು ಕೇಳುವ ಮಾನವೀಯತೆ ಇಲ್ಲ: ಮಾಸಿ ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು, ಸೆಪ್ಟೆಂಬರ್ 15, 2019 (www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವಿಟ್ಟರ್’ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಕರ್ನಾಟಕ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದು ಟ್ವೀಟ್ ಮಾಡಿದ್ದಾರೆ.

2009ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ್ದ ನೆರೆಯ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ ಬಂದು ಸಮೀಕ್ಷೆ ನಡೆಸಿ ತಕ್ಷಣ ರೂ. 1,500 ಕೋಟಿ ಪರಿಹಾರ ಘೋಷಿಸಿದ್ದರು. ಈಗಿನ ಪ್ರಧಾನಿ ಎಲ್ಲಿದ್ದಾರೆ ? ಎಂದು ಪ್ರಶ್ನಿಸಿದ್ದಾರೆ.