Saturday, August 29, 2026

BDA Apartments

Home Crime ಹೃದ್ರೋಗ ಸಮಸ್ಯೆ ಮಾಜಿ ಮೇಯರ್ ಸಂಪತ್ ರಾಜ್ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್

ಹೃದ್ರೋಗ ಸಮಸ್ಯೆ ಮಾಜಿ ಮೇಯರ್ ಸಂಪತ್ ರಾಜ್ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು, ನವೆಂಬರ್ 22, 2020 (www.justkannada.in): ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಹೃದ್ರೋಗ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಿ, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ಸಂಪತ್ ರಾಜ್ ಆರೋಗ್ಯದಲ್ಲಿ ಏರುಪೇರಾಗಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಹೃದ್ರೋಗ ಸಮಸ್ಯೆ ಕಾಣಿಸಿಕೊಂಡಿದೆ. ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.