ಸಿಇಟಿ ಅರ್ಜಿ ಸಲ್ಲಿಕೆಗೆ ಜುಲೈ16 ರವರೆಗೆ ದಿನಾಂಕ ವಿಸ್ತರಣೆ.

ಬೆಂಗಳೂರು,ಜುಲೈ,9,2021(www.justjkannada.in):  ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಿಇಟಿ ಅರ್ಜಿ ಸಲ್ಲಿಕೆಗೆ ಜುಲೈ 16ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ.jk

ವೃತ್ತಿಪರ ಕೋರ್ಸ್ ಗಳ ಸೀಟುಗಳ ಆಯ್ಕೆಗಾಗಿ ನಡೆಯುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ನಾಳೆ(ಜುಲೈ10)ಗೆ ಅಂತ್ಯವಾಗಿತ್ತು. ಆದರೆ ಕೊರೋನಾ ಲಾಕ್ ಡೌನ್ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ತೊಂದರೆಯಾಗಿತ್ತು. ಹೀಗಾಗಿ ಅರ್ಜಿ ಸಲ್ಲಿಕೆ ದಿನಾಂಕವನ್ನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ.16, 2021ರವರೆಗೆ ವಿಸ್ತರಣೆ ಮಾಡಿದೆ.

 ಸಿಇಟಿ-2021ರ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು, ಅನೇಕ ವಿದ್ಯಾರ್ಥಿಗಳು, ಪೋಷಕರು ಅರ್ಜಿ ಸಲ್ಲಿಸಲು ಅವಕಾಶ ನೀಡಲು ಕೋರಿರುವುದರಿಂದ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧೀಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Key words: Expansion – CET- Application –Submission- till- July 16