Saturday, August 15, 2026

BDA Apartments

Home Front Page ನಾನು ಹಣ ಪಡೆದಿರುವ ಬಗ್ಗೆ ಸ್ಪಷ್ಟ ವಿವರಣೆ ನೀಡಿ- ಸಿದ್ಧರಾಮಯ್ಯಗೆ  ಮಾಜಿ ಸಚಿವ ಜಿ.ಟಿ ದೇವೇಗೌಡ...

ನಾನು ಹಣ ಪಡೆದಿರುವ ಬಗ್ಗೆ ಸ್ಪಷ್ಟ ವಿವರಣೆ ನೀಡಿ- ಸಿದ್ಧರಾಮಯ್ಯಗೆ  ಮಾಜಿ ಸಚಿವ ಜಿ.ಟಿ ದೇವೇಗೌಡ ಆಗ್ರಹ….

ಮೈಸೂರು,ಡಿಸೆಂಬರ್,1,2020(www.justkannada.in):  ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿ.ಟಿ ದೇವೇಗೌಡ ಹಣ ಪಡೆದಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಮಾಡಿದ್ದ ಆರೋಪಕ್ಕೆ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಸಿದ್ದರಾಮಯ್ಯ ಅವರಿಗೆ ಜಿಟಿ ದೇವೇಗೌಡ ಏನು ಅಂತಾ 25 ವರ್ಷದಿಂದ ಗೊತ್ತಿದೆ. 25 ವರ್ಷಗಳಲ್ಲಿ ವರ್ಗಾವಣೆ, ಕಾಮಗಾರಿ, ಚುನಾವಣೆಯಲ್ಲಿ ದುಡ್ಡು ತೆಗೆದುಕೊಂಡಿರುವುದನ್ನ ಹೇಳಲಿ. ನಾನು ರಾಜಕಾರಣದಲ್ಲೇ ಇರುವುದಿಲ್ಲ ಎಂದು ಸವಾಲು ಹಾಕಿದ್ದಾರೆ. ನಾನು ಸಿದ್ದರಾಮಯ್ಯ ಅವರಿಂದ ಹಣ ಪಡೆದಿರುವ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ವಿವರಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.logo-justkannada-mysore

ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೆ. ನಮ್ಮ ಮುಖಂಡರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲಿಸುವಂತೆ ಹೇಳಿದ್ದೆ. ಬೂತ್ ಖರ್ಚು ವ್ಯವಸ್ಥೆಗಾಗಿ ಯತೀಂದ್ರ ಹಾಗೂ ನಮ್ಮ ಪಕ್ಷದ ರಾಜು ವಿತರಣೆ ಮಾಡಿದ್ರು. ಚುನಾವಣೆಯಲ್ಲಿ ನಾನು ಹಣಕಾಸಿನ ವ್ಯವಹಾರ ಮಾಡಿಲ್ಲ. ನಾನು ವೈಯಕ್ತಿಕವಾಗಿ ಹಣ ನೀಡಿಲ್ಲ. ಸ್ಪಷ್ಟವಾಗಿ ಆತ್ಮಸಾಕ್ಷಿಯಾಗಿ ನಾನು ಇದನ್ನು ಹೇಳುತ್ತಿದ್ದೇನೆ ಎಂದು ಜಿ.ಟಿ ದೇವೇಗೌಡ ಸ್ಪಷ್ಟನೆ ನೀಡಿದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಮಂಡ್ಯ ತುಮಕೂರಿನ ಸೋಲು ಅನುಮಾನಗಳಿಗೆ ಕಾರಣವಾಗಿತ್ತು. ಅಭ್ಯರ್ಥಿಗಳನ್ನು ಸೋಲಿಸಿದ್ದು ಜನರು, ಹಣ ಅಲ್ಲ. ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಆಗಲಿಲ್ಲ. ದಿಢೀರ್ ಹೊಂದಾಣಿಕೆ ಆದ್ದರಿಂದ ಅದು ಕೆಲಸ ಮಾಡಲಿಲ್ಲ. ಮೋದಿ ಹವಾದಿಂದ ಎಲ್ಲರೂ ಗೆದ್ದಿದ್ದಾರೆ. ಇದಕ್ಕೆ ಬೇರೆ ಯಾರು ಕಾರಣ ಅಲ್ಲ. ನಾನು ಸಿದ್ದರಾಮಯ್ಯ ಅವರಿಂದ ಹಣ ಪಡೆದಿರುವ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ವಿವರಣೆ ನೀಡಬೇಕು ಎಂದು ಹೇಳಿದರು.explain-money-former-minister-gt-deve-gowda-demands-former-cm-siddaramaiah

ಮುಂದೆ ಜೆಡಿಎಸ್‌ನಲ್ಲಿ ಉಳಿದರೂ ಅಚ್ಚರಿಯಿಲ್ಲ…

ಜೆಡಿಎಸ್ ಕಾಂಗ್ರೆಸ್ ಬಿಜೆಪಿ ಸೇರಿ ಎಲ್ಲಾ ಕಡೆ ರಾಜಕಾರಣ ಕಲುಷಿತಗೊಂಡಿದೆ. ಜೆಡಿಎಸ್‌ನಿಂದ ಗೆದ್ದಿದ್ದೇನೆ ಅದರಲ್ಲೇ ಇದ್ದೇನೆ. ಮುಂದೆ ಜೆಡಿಎಸ್‌ನಲ್ಲಿ ಉಳಿದರೂ ಅಚ್ಚರಿಯಿಲ್ಲ.ಅವರು ನಡವಳಿಕೆಯನ್ನ ನೇರವಾಗಿ ಹೇಳಿದ್ದೇನೆ ಎಂದು ಶಾಸಕ ಜಿ ಟಿ ದೇವೇಗೌಡ ತಿಳಿಸಿದರು.

Key words: Explain –money-Former minister -GT Deve Gowda -demands –former cm-Siddaramaiah