ಬೆಳಗಾವಿವರೆಗೂ ವಂದೇ ಭಾರತ್​ ರೈಲು ವಿಸ್ತರಿಸಿ- ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದ  ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಅಕ್ಟೋಬರ್, 31,2023(www.justkannada.in): ಬೆಳಗಾವಿವರೆಗೂ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ವಿಸ್ತರಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಕುರಿತು  ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಿಂದ ಹುಬ್ಬಳ್ಳಿ ಧಾರವಾಡವರೆಗೆ ಇರುವ ವಂದೇ ಭಾರತ್ ರೈಲು ಸಂಪರ್ಕವನ್ನು ಬೆಳಗಾವಿ ತನಕ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದಾರೆ. ವಂದೇ ಭಾರತ್ ರೈಲು ಸಂಪರ್ಕ ವಿಸ್ತರಣೆಯಿಂದ ಬೆಳಗಾವಿ ಜಿಲ್ಲೆಗೆ ಸಾಕಷ್ಟು ಅನುಕೂಲವಾಗಲಿದೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯತನಕ ವಿಸ್ತರಣೆ ಮಾಡಿದರೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೂ ಉತ್ತಮ ಸಂಪರ್ಕ ಕಲ್ಪಿಸಲು ಅನುಕೂಲವಾಗಲಿದೆ. ಹೀಗಾಗಿ ವಂದೇ ಭಾರತ್ ರೈಲು ಸಂಪರ್ಕವನ್ನ ಹುಬ್ಬಳ್ಳಿ – ಧಾರವಾಡದಿಂದ ಬೆಳಗಾವಿ ತನಕ ವಿಸ್ತರಣೆ ಮಾಡುವಂತೆ  ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

Key words: Extend -Vande Bharat -train – Belgaum- CM -Siddaramaiah – Union Railway Minister