HSRP ನಂಬರ್​ ಪ್ಲೇಟ್​​ ಅಳವಡಿಸುವ ಅವಧಿ 3 ತಿಂಗಳು ವಿಸ್ತರಣೆ.

ಬೆಂಗಳೂರು, ಫೆಬ್ರವರಿ 14,2024(www.justkannada.in): ವಾಹನ ಸವಾರರಿಗೆ  ಸಿಹಿಸುದ್ದಿ ಸಿಕ್ಕಿದ್ದು, ವಾಹನಗಳಿಗೆ  ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್​ ಪ್ಲೇಟ್ (HSRP) ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ವಿಧಾನ್​ ಪರಿಷತ್ ​​ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ವಿಚಾರವನ್ನ ಕಾಂಗ್ರೆಸ್ ಸದಸ್ಯ ಮಾದೇಗೌಡ  ಅವರು ಪ್ರಸ್ತಾಪಿಸಿದರು. ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್ ​ಲೈನ್​ ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಹೇಳಿದರು.

Key words: Extension – HSRP- number plate- installation -period – 3 months.