ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಬೆಂಗಳೂರು, ಜುಲೈ,18,2024 (www.justkannada.in):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ.

ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಅಂಡ್ ಗ್ಯಾಂಗ್ ನ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು.

ಇದೀಗ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ಜುಲೈ 18ರವರೆಗೆ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

Key words: Extension, judicial custody, actor, Darshan