ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ.

ಬೆಂಗಳೂರು,ಜೂನ್,11,2021(www.justkannada.in):  ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ. ಹೊರಡಿಸಿದೆ.jk

ಈ ಕುರಿತು ಡಿಸಿಎಂ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಆದೇಶ ಹೊರಡಿಸಿದ್ದು, ಜೂನ್ 30ರವರೆಗೆ ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ ಮಾಡಲಾಗಿದೆ . ಕೋವಿಡ್-19 ರ 2ನೇ ಅಲೆ ಹಿನ್ನೆಲೆಯಲ್ಲಿ ಎಲ್ಲಾ ಸರಕು ಸಾಗಾಣಿಕೆ ಮತ್ತು ಸಾರಿಗೆ ಪ್ರಯಾಣಿಕರ ವಾಹನ ಮಾಲೀಕರ ಅನುಕೂಲಕ್ಕಾಗಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ಕಲಂ 4 (1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ದಿನಾಂಕ 15-06-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಸಲು ದಿನಾಂಕ 30-06-2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.

ಸರ್ಕಾರ ಕೈಗೊಂಡಿರುವ ಈ ಕ್ರಮದ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು  ಸಚಿವ ಲಕ್ಷ್ಮಣ್  ಸವದಿ ಅವರು ಮನವಿ  ಮಾಡಿಕೊಂಡಿದ್ದಾರೆ.

Key words: Extension – Vehicle -Tax Payment- Period-DCM- Lakshman savdi