Monday, September 14, 2026

BDA Apartments

ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಿ- ಶಾಸಕಿ ಸೌಮ್ಯಾರೆಡ್ಡಿ BDA JK_Adv BDA Adv
Home Front Page ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಿ- ಶಾಸಕಿ ಸೌಮ್ಯಾರೆಡ್ಡಿ.

ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಿ- ಶಾಸಕಿ ಸೌಮ್ಯಾರೆಡ್ಡಿ.

ಬೆಂಗಳೂರು,ಜುಲೈ,21,2022(www.justkannada.in): ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸದಾ ಮುಂದಿರಬೇಕು, ಇದೇ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾಗ ನಾನೂ ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದೆ. ಭವಿಷ್ಯದ ಸಾಧನೆಗೆ ಈ ಹಂತ ಪ್ರಮುಖ ಘಟ್ಟ ಎಂದು ಜಯನಗರ ಶಾಸಕಿ ಸೌಮ್ಯಾರೆಡ್ಡಿ ವಿಧ್ಯಾರ್ಥಿಗಳಿಗೆ ಕರೆ ನೀಡಿದರು.

ಜಯನಗರ ನ್ಯಾಷನಲ್ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ವಿಭಾಗದಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಿ dadsaf

ಕಾರ್ಯಕ್ರಮದಲ್ಲಿ ನ್ಯಾಷನಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಎ. ಹೆಚ್. ರಾಮರಾವ್, ಗೌರವ ಕಾರ್ಯದರ್ಶಿಗಳಾದ ಪ್ರೊ. ಎಸ್. ಎನ್. ನಾಗರಾಜ ರೆಡ್ಡಿ, ಡಾ.ಪಿ ಸದಾನಂದ ಮಯ್ಯ, ಪ್ರಾಂಶುಪಾಲರಾದ ಡಾ.ವೈ.ಸಿ ಕಮಲ, ಉಪ ಪ್ರಾಂಶುಪಾಲರಾದ ಪ್ರೊ. ಎಚ್. ಸಿ. ಬೆಲ್ಲದ್ ಮತ್ತು ಅಧ್ಯಾಪಕರು ಭಾಗವಹಿಸಿದ್ದರು.

Key words: extracurricular-activities –students- MLA Soumya Reddy