ಜನರ ವಿಶ್ವಾಸ ಗಳಿಸಲು ವಿಫಲ: ಆಪರೇಷನ್ ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ಗೊತ್ತಿಲ್ಲ-ಸಿಎಂ ಸಿದ್ದರಾಮಯ್ಯ.

ವಿಜಯಪುರ, ಫೆಬ್ರವರಿ,2,2024(www.justkannada.in):   ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ.  ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಇಂದು ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಸಿನಿಂದ ಹಲವಾರು ನಾಯಕರು ದುಂಬಾಲು ಬಿದ್ದಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.  ಹಿಂದೆಯೂ ಎರಡು ಬಾರಿ ಹಾಗೇ ಮಾಡಿದ್ದಾರೆ. 2008 ರಿಂದ ಯಡಿಯೂರಪ್ಪ,  ಬಸವರಾಜ ಬೊಮ್ಮಾಯಿ ಇದ್ದಾಗಲೂ ಇದನ್ನೇ ಮಾಡಿದ್ದು. ಎಲ್ಲಾ ಕಡೆ ಕೊಂಡುಕೊಳ್ಳಲು ಪ್ರಯತ್ನ ಮಾಡುತ್ತಾರೆ. ಕೊಂಡುಕೊಳ್ಳಲು ಜನ ಸಿಕ್ಕರೆ ಸರ್ಕಾರ ರಚನೆ ಮಾಡುತ್ತಾರೆ ಎಂದು ಹರಿಹಾಯ್ದರು.

ಬಿಜೆಪಿಗೆ ಜನ ಪೂರ್ಣ ಅಧಿಕಾರ ಕೊಟ್ಟೇ ಇಲ್ಲ

ರಾಜ್ಯದಲ್ಲಿ ಜನರು ಬಿಜೆಪಿಗೆ ಜನ ಪೂರ್ಣ ಅಧಿಕಾರ ಕೊಟ್ಟೇ ಇಲ್ಲ. 2008, 2013, 2018 ರಲ್ಲಿ ಅವರು ಬಹುಮತದಿಂದ ಗೆದ್ದೇ ಇಲ್ಲ. ಕಾಂಗ್ರೆಸ್ ಪಕ್ಷ 2013ರಲ್ಲಿ ಗೆದ್ದಿದೆ.  2018 ರಲ್ಲಿ ಸೋತು ಪುನಃ  2023 ರಲ್ಲಿ 136 ಸ್ಥಾನಗಳನ್ನು ಪಡೆದು  ಗೆದ್ದಿದ್ದೇವೆ ಎಂದರು.  ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಹಾಗೂ ತೀರ್ಪಿನಂತೆ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬರುತ್ತಾರೆ ಎಂದರು.

ರಾಷ್ಟ್ರಧ್ವಜ, ಭಾರತ ದೇಶದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ.

ಮಂಡ್ಯದಲ್ಲಿ ಹನುಮಧ್ವಜ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷರು ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಮಂಡ್ಯದ ಪ್ರಕರಣದ ವಾಸ್ತವಾಂಶವೇ ಅವರಿಗೆ ತಿಳಿದಿಲ್ಲ. ಅಲ್ಲಿ ಕೇವಲ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಹಾರಿಸುವುದಾಗಿ ಕೆರಗೋಡು ಗ್ರಾಮಪಂಚಾಯ್ತಿಯಲ್ಲಿ ಅನುಮತಿ ಪಡೆದುಕೊಂಡು ಕೇಸರಿ ಧ್ವಜ ಹಾರಿಸಲು ಮುಂದಾಗಿದ್ದರು. ಅವರಿಗೆ ರಾಷ್ಟ್ರಧ್ವಜದ ಬಗ್ಗೆ ಯಾವುದೇ ಗೌರವವಿಲ್ಲ. ರಾಷ್ಟ್ರಧ್ವಜ, ಭಾರತ ದೇಶದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ. ಇಂತಹ ರಾಷ್ಟ್ರಧ್ವಜವನ್ನು ಹಾಕಲು ಒಪ್ಪದಿರುವವರು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಕಾಂಗ್ರೆಸ್ ಕಾಶ್ಮೀರದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ನೀಡುವುದಿಲ್ಲ ಎಂಬ ಬಿಜೆಪಿಯವರ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಪಕ್ಷ ರಾಷ್ಟ್ರಧ್ವಜಕ್ಕೆ ಸದಾ ಗೌರವ ನೀಡುತ್ತದೆ. 1935 ರಲ್ಲಿ ದೇಶಕ್ಕೆ ರಾಷ್ಟ್ರಧ್ವಜವನ್ನು ನೀಡಿದವರು ಕಾಂಗ್ರೆಸ್ ಪಕ್ಷ ಎಂದರು.

ರಾಜ್ಯದಲ್ಲಿ 1.17 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ

ಗೃಹಲಕ್ಮೀ ಯೋಜನೆ ವಿಜಯಪುರ ಜಿಲ್ಲೆಯಲ್ಲಿಯೇ ಅತ್ಯಂತ  ಯಶಸ್ವಿಯಾಗಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಎಲ್ಲಿ ಹೆಚ್ಚು ನೋಂದಣಿಯಾಗಿದೆಯೋ ಅಲ್ಲಿ ಹೆಚ್ಚಾಗಿರುತ್ತದೆ.  ರಾಜ್ಯದಲ್ಲಿ 1.17 ಕೋಟಿ ಮಹಿಳೆಯರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗುತ್ತಿದೆ. ವಿಜಯಪುರ ದೊಡ್ಡ ಜಿಲ್ಲೆಯಾಗಿದ್ದು ಇಲ್ಲಿ ಹೆಚ್ಚಾಗಿದೆ ಎಂದರು.

ENGLISH SUMMARY…

Unable to gain the trust of the people, the BJP traps MLAs in Operation Kamala

BJP knows nothing except operation: Chief Minister Siddaramaiah

Vijayapura, February 02:Chief Minister Siddaramaiah said that failing to gain the trust and confidence of the people, the BJP knows nothing but operations. He criticized that MLAs are purchased giving money to get majority.

He was speaking to the media at Muddebihal helipad today.

Reacting to BJP state President Vijayendra and Vidhana Parishad member Jagdish Shettar’s remark that many leaders from the Congress are behind us asking to be taken into the BJP, the CM said that they have done the same twice in the past. Since 2008, Yeddiurappa and Basavaraja Bommai have done the same. They try to buy MLAs from everywhere. He said that if they get MLAs to buy, they will form a government.

People have not given complete Majority to BJP

People in the state have never given complete majority to BJP. In 2008, 2013, 2018 they never won with majority. The Congress party won in 2013. He said that we lost in 2018 and won again in 2023 by securing 136 seats. The Congress party comes to power based on the trust and judgement of the people. He said that BJP will come to power through Operation Kamala.

The National flag is the symbol of the identity of 140 crore people of India

Reacting to the BJP state president’s demand that the Hanumadhwaja case in Mandya should be handed over to CBI ,the CM said that that he does not know the facts of Mandya case. They had taken permission from the Keragodu Gram Panchayat to hoist only the national flag and the Kannada flag there, and instead they have hoisted the saffron flag. They have no respect for the National flag. The national flag is the symbol of the identity of 140 crore people of India. The CM quipped that ‘those who do not agree to hoist the national flag claim to be patriots’ .

Responding to BJP’s allegation that the Congress, which respects the National flag in Mandya, does not respect it in Kashmir. The Congress party always respects the national flag. He said that it was the Congress party that gave the national flag to the country in 1935.

Grilahakshmi for 1.17 crore women in the state

Commenting about Grihalakshmi scheme being most successful in Vijayapur district, the CM said , ‘where there are more registrations, success rate is high. Money is being transferred through DBT to 1.17 crore women of the state. Vijayapur is a big district and hence the success rate is high the CM opined.

Key words: Failed – gain -people’s trust- BJP – CM- Siddaramaiah