7 ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ ಎಂಬುದು ಸುಳ್ಳು ಸುದ್ಧಿ- ಡಿ.ಕೆ ಶಿವಕುಮಾರ್.

ಬೆಂಗಳೂರು,ಮಾರ್ಚ್,18,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನ ಮೊದಲ ಪಟ್ಟಿ ಸಿದ್ಧವಾಗುತ್ತಿದ್ದು ಯುಗಾದಿ ಹಬ್ಬದ ದಿನದಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಲಿದೆ ಎನ್ನಲಾಗಿತ್ತು. ಆದರೆ ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಮಾತನಾಡಿರುವ ಡಿ.ಕೆ ಶಿವಕುಮಾರ್,  ಹಾಲಿ 7 ಶಾಸಕರಿಗೆ ಟಿಕೆಟ್ ಇಲ್ಲ ಎಂಬುದು ಸುಳ್ಳು ಇಬ್ಬರು ಶಾಸಕರು ಸ್ವಯಂಪ್ರೇರಿತರಾಗಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದಾರೆ. ಇಬ್ಬರು ಹಾಲಿ ಶಾಸಕರು ಬೇರೆಯವರ ಹೆಸರನ್ನ ಸೂಚಿಸಿದ್ದಾರೆ ಅಷ್ಟೆ. 7 ಶಾಸಕರಿಗೆ ಟಿಕೆಟ್ ಇಲ್ಲ ಎಂಬುದು ಸುಳ್ಳು ಸುದ್ಧಿ ಎಂದು ಹೇಳಿದರು.

ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶ ನಡೆಯಲಿದೆ. ರಾಹುಲ್ ಗಾಂಧಿ ಪ್ರವಾಸ ಬಳಿಕ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಇನ್ನು ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ರಾಹುಲ್ ಗಾಂಧಿ ಸಲಹೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಈ ಕುರಿತು ಸಿದ್ದರಾಮಯ್ಯರನ್ನೇ ಕೇಳಿ ಎಂದರು.

Key words: fake news- 7 sitting MLAs -do not – tickets – DK Shivakumar.