ಫ್ಲೋರಿಡಾ,ಜೂನ್,25,2025 (www.justkannada.in): ಅಮೆರಿಕದ ಆಕ್ಸಿಯಮ್-4 ಮಿಷನ್ ಅಡಿ ಭಾರತದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಫಾಲ್ಕನ್ -9 ರಾಕೆಟ್ ಉಡಾವಣೆ ಯಶಸ್ವಿಯಾಗಿದೆ.
ಅಮೇರಿಕಾದ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್ X ಫಾಲ್ಕನ್ 9 ರಾಕೆಟ್ ಉಡಾವಣೆ ಯಶಸ್ವಿಯಾಗಿದ್ದು, ಸ್ಪೇಸ್‌ಎಕ್ಸ್ ಬಾಹ್ಯಾಕಾಶ ನೌಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್)ದತ್ತ ಪ್ರಯಾಣ ಬೆಳೆಸಿದೆ. ಜೂನ್ 26 ರಂದು ಸಂಜೆ ಬಾಹ್ಯಾಕಾಶ ನಿಲ್ದಾಣದಲ್ಲಿ ಡಾಕಿಂಗ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಡೀ ಭಾರತವನ್ನು ಪ್ರತಿನಿಧಿಸಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ಮೂಲಕ ಭಾರತ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಅಮೇರಿಕಾದ ಪೆಗ್ಗಿ ವಿಟ್ಸನ್, ಪೈಲಟ್ ಶುಭಾಂಶು ಶುಕ್ಲಾ, ತಜ್ಞರಾದ ಹಂಗೇರಿಯ ಟಿಗೋರ್ ಕಾಪು ಮತ್ತು ಪೋಲೆಂಡ್ ನ ಸ್ಲಾವೋಸ್ಜ್ ಉಜ್ನಾನ್ಸ್ಕಿ ಇದ್ದಾರೆ.
Key words: Falcon-9, rocket, launch, successful, India, Shubanshu Shukla