Friday, September 18, 2026

BDA Apartments

ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರು ಮಾಜಿ ಸಿಎಂಗಳು ಕಾರಣ : ‌ಶಾಸಕ ಜಿ.ಟಿ.ದೇವೇಗೌ...
Home Front Page ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರು ಮಾಜಿ ಸಿಎಂಗಳು ಕಾರಣ : ‌ಶಾಸಕ ಜಿ.ಟಿ.ದೇವೇಗೌಡ

ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರು ಮಾಜಿ ಸಿಎಂಗಳು ಕಾರಣ : ‌ಶಾಸಕ ಜಿ.ಟಿ.ದೇವೇಗೌಡ

ಮೈಸೂರು,ಡಿಸೆಂಬರ್,20,2020(www.justkannada.in) : ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಕಾರಣ‌ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.Teachers,solve,problems,Government,bound,Minister,R.Ashok

ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ವಾಗ್ವಾದ ವಿಚಾರ ಕುರಿತು ಮಾತನಾಡಿದ ಜಿ.ಟಿ.ದೇವೇಗೌಡ, ಮೈತ್ರಿ ಸರ್ಕಾರ ಬೀಳುತ್ತೆ ಅಂತ ಗೊತ್ತಿತ್ತು.  ಗೊತ್ತಿದ್ದರೂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿ ಕುಳಿತುಕೊಂಡರು.  ಶಾಸಕರು ಬಿಟ್ಟು ಹೋಗುತ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು ಎಂದಿದ್ದಾರೆ.fall,alliance,government,Two,Former CMs,Reason,Legislator,G.T.DeveGowda

ಮನಸ್ಸು ಮಾಡಿದ್ದರೆ ತಡೆಯಬಹುದಿತ್ತು. ಆದರೆ, ತಡೆಯುವ ಪ್ರಯತ್ನ ಮಾಡಲಿಲ್ಲ. ಆದ್ದರಿಂದ ಮೈತ್ರಿ  ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣಕರ್ತರು‌ ಎಂದು ಮೈಸೂರು ತಾಲೂಕಿನ ಸಿದ್ದಲಿಂಗಪುರದಲ್ಲಿ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

key words : fall-alliance-government-Two-Former CMs-Reason-Legislator-G.T.DeveGowda