ಕಾಂಗ್ರೆಸ್ ನಿಂದ ಸುಳ್ಳು ಭರವಸೆ: ಉಚಿತ ಘೋಷಿಸಲು ಬೊಕ್ಕಸಕ್ಕೆ ಎಲ್ಲಿಂದ ಹಣ ಬರುತ್ತೆ- ಗೃಹ ಸಚಿವ ಅರಗ ಜ್ಞಾನೇಂದ್ರ.

ಬೆಂಗಳೂರು,ಜನವರಿ,17,2023(www.justkannada.in): ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಲೇವಡಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ,, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ನೀಡಲ್ಲ ಉಚಿತ ಘೋ಼ಷಿಸಲು ಬೊಕ್ಕಸಕ್ಕೆ ಎಲ್ಲಿಂದ ಹಣ ಬರುತ್ತದೆ . ನೀರಾವರಿ ರಸ್ತೆಗಳು ಇದಕ್ಕೆಲ್ಲಾ ಎಲ್ಲಿಂದ ಹಣ ಬರುತ್ತೆ. ಬಿಎಸ್ ವೈ ಅವರು ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದರು. ಕಾಂಗ್ರೆಸ್ ನವರು ವೋಟಿಗಾಗಿ ಸುಳ್ಳು ಭರವಸೆ ನೀಡುತ್ತಿದ್ದಾರೆ. ಸುಳ್ಳು ಭರವಸೆ ಕೊಟ್ಟು ಚುನಾವಣೆ ಎದುರಿಸುತ್ತಿದ್ದಾರೆ. ಇವರ ಸುಳ್ಳು ಭರವಸೆಯನ್ನ ಜನರು ನಂಬಲ್ಲ ಎಂದು ಟಾಂಗ್ ನೀಡಿದರು.

ಶಾಸಕ ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವ ಅರಗ ಜ್ಞಾನೇಂದ್ರ, ಕೆಂಪಣ್ಣ ವಿರುದ್ದವೂ ಕೇಸ್ ನಡೆಯುತ್ತಿದೆ. ತಿಪ್ಪಾರೆಡ್ಡಿ ವಿರುದ್ದ ಆರೋಪ ಮಾಡಿದ್ದಾರೆ. ಸಾಕ್ಷ್ಯಾದಾರ ಇಲ್ಲದೆ ಸುಳ್ಳು ಆರೋಪ ಮಾಡಿದ್ದಾರೆ. ಸುಖಾಸುಮ್ಮನೆ ಆರೋಪ ಮಾಡಬಾರದು. ಸುಳ್ಳು ಆರೋಪ ಮಾಡಿದವರು ಅನುಭವಿಸುತ್ತಾರೆ ಎಂದು ಕಿಡಿಕಾರಿದರು.

Key words: False -promise – Congress-  Home Minister -Araga Jnanendra.