Sunday, September 13, 2026

BDA Apartments

ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ನಿಧನ BDA JK_Adv BDA Adv
Home Cinema ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ನಿಧನ.

ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ನಿಧನ.

ಬೆಂಗಳೂರು,ಫೆಬ್ರವರಿ,6,2023(www.justkannada.in):  ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ (74) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 1986ರಲ್ಲಿ ವರ್ಮಾ ಅವರ ಮೊದಲ ಏಕವ್ಯಕ್ತಿ ಕಲಾಕೃತಿಗಳ ಪ್ರದರ್ಶನ ನಡೆದಿತ್ತು. ದೇವತೆಗಳು, ಹಸಿರುವ ಉಳಿಸುವ ವೃಕ್ಷ ಮಾಲಿನಿ ಬಿಕೆಎಸ್ ವರ್ಮಾ ಕುಂಚದಲ್ಲಿ ಆರಳಿದ ಚಿತ್ರಗಳು. ವರ್ಮಾ ಮಿಂಚಿನ ಕಲಾತ್ಮಕತೆಗೆ ಹೆಸರುವಾಸಿಯಾಗಿದ್ದರು.  ವಿಶ್ವದೆಲ್ಲಡೆ ಕಲಾಕೃತಿ ಪ್ರದರ್ಶನವಾಗಿತ್ತು.

ರವಿವರ್ಮನ ಕಲಾಕೃತಿಗಳಿಂದ ಪ್ರೇರಣೆ ಪಡೆದಿದ್ದ ಅವರು ತೈಲವರ್ಣದಲ್ಲಿ ಚಿತ್ರ ಬಿಡಿಸುತ್ತಿದ್ದರು. ಕನ್ನಡ ತಾಯಿ ಭುವನೇಶ್ವರಿ, ಭಾರತಮಾತೆ, ಪೂಜೆಯಲ್ಲಿ ಮೈಮರೆತ ರಾಘವೇಂದ್ರ ಸ್ವಾಮಿ, ಈಶ್ವರ ಕುಟುಂಬ ಕಲಾಕೃತಿಗಳು ವಿಶ್ವಮಟ್ಟದಲ್ಲಿ ಜನಪ್ರಿಯವಾಗಿದ್ದವು. ಮನೆಮನೆಗಳಲ್ಲೂ ಪೂಜೆಗೊಳ್ಳುತ್ತಿದ್ದವು.

Key words: Famous- artist-B. K. S. Verma -passed away.