Sunday, September 20, 2026

BDA Apartments

Home Front Page ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ- ಸಚಿವ ಶಿವಾನಂದ್ ಪಾಟೀಲ್ ವಿರುದ್ದ ಮಾಜಿ ಸಿಎಂ ಹೆಚ್.ಡಿಕೆ...

ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ- ಸಚಿವ ಶಿವಾನಂದ್ ಪಾಟೀಲ್ ವಿರುದ್ದ ಮಾಜಿ ಸಿಎಂ ಹೆಚ್.ಡಿಕೆ ಕಿಡಿ.

ಬೆಂಗಳೂರು,ಡಿಸೆಂಬರ್,25,2023(www.justkannada.in):  ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ರೈತರ ಬಗ್ಗೆ ಹಗುರವಾಗಿ, ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡನೀಯ. ಅನ್ನದಾತನ ಸಂಕಷ್ಟವನ್ನು ಅವಮಾನಿಸುವುದು ಸರಿಯಲ್ಲ . ರೈತರು ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ ಎಂದು ವಾಗ್ದಾಳಿ ನಡೆಸಿದರು.ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ hdk hdk 1

ನಾನು ಕೃಷಿ ಸಾಲಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ನೆನೆಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತರ ಕಷ್ಟಗಳನ್ನು ಅವಮಾನ ಮಾಡುವುದು ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಎಚ್ಚರಿಕೆ, ಸೂಕ್ಷ್ಮತೆಯಿಂದ ಮಾತನಾಡಬೇಕು.  ಸಚಿವರು ತಕ್ಷಣ ಕ್ಷಮೆ ಕೇಳಿ ತಮ್ಮ ಹೇಳಿಕೆಯನ್ನ ಹಿಂಪಡೆಯಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು.

Key words:  farmer – Minister -Shivanand Patil- Former CM- HD Kumaraswamy