Friday, October 16, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ಅನ್ನದಾತರ ಸಬಲೀಕರಣಕ್ಕೆ ಸರ್ಕಾರ ಬದ್ಧ – ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಅನ್ನದಾತರ ಸಬಲೀಕರಣಕ್ಕೆ ಸರ್ಕಾರ ಬದ್ಧ – ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಅನ್ನದಾತರ ಸಬಲೀಕರಣಕ್ಕೆ ಸರ್ಕಾರ ಬದ್ಧ – ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಮೈಸೂರು,ಅಕ್ಟೋಬರ್‌,̧16,2026(www.̤justkannada̤.in): ದೇಶ ಎಷ್ಟೇ ಅಭಿವೃದ್ಧಿ ಹೊಂದಲಿ ಮತ್ತು ಕೈಗಾರಿಕೆಗಳು ಎಷ್ಟೇ ಬೆಳೆಯಲಿ, ಅನ್ನದಾತ, ರೈತ ಬೆಳೆ ಬೆಳೆದರೆ ಮಾತ್ರ ನಾವು ಬದುಕಲು ಸಾಧ್ಯ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ಜೆ.ಕೆ. ಮೈದಾನದಲ್ಲಿ ಕೃಷಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ‘ರೈತ ದಸರಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಹೇಳಿದಂತೆ ನಿಜವಾದ ಭಾರತ ಇರುವುದು ಗ್ರಾಮೀಣ ಪ್ರದೇಶಗಳಲ್ಲಿ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ, ದೇಶವೇ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.ಅನ್ನದಾತರ ಸಬಲೀಕರಣಕ್ಕೆ ಸರ್ಕಾರ ಬದ್ಧ – ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ನಮ್ಮ ದೇಶದಲ್ಲಿ ಶೇಕಡಾ 46ರಷ್ಟು ಉದ್ಯೋಗ ಸೃಷ್ಟಿಯಾಗುವುದು ಕೃಷಿಯಿಂದಲೇ ಮತ್ತು ಶೇಕಡಾ 18ರಷ್ಟು ಜಿಡಿಪಿ ಕೃಷಿಯಿಂದ ಬರುವುದರಿಂದ ರಾಷ್ಟ್ರದ ಆರ್ಥಿಕತೆಯಲ್ಲಿ ಕೃಷಿಗೆ ತನ್ನದೇ ಆದ ಮಹತ್ವವಿದೆ ಎಂದು ಅವರು ವಿವರಿಸಿದರು.

ರಾಷ್ಟ್ರಕವಿ ಕುವೆಂಪು ಅವರ ಮಾತುಗಳನ್ನು ಸ್ಮರಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಯಾವುದೇ ಸರ್ಕಾರ ಅಥವಾ ಪಕ್ಷ ಅಧಿಕಾರಕ್ಕೆ ಬಂದರೂ ಕೃಷಿ ಕಾಯಕ ನಿರಂತರವಾಗಿ ನಡೆಯುತ್ತಲೇ ಇರಬೇಕು, ಈ ಹಿನ್ನೆಲೆಯಲ್ಲಿ ಕೃಷಿಕರೇ ನಿಜವಾದ ಕಾಯಕ ಯೋಗಿಗಳು ಎಂದು ಅಭಿಪ್ರಾಯಪಟ್ಟರು.

ಬರ ಪರಿಹಾರ ಹಾಗೂ ಕೃಷಿ ಉತ್ತೇಜನಕ್ಕೆ ಒತ್ತು ನೀಡಿದ್ದು

ರಾಜ್ಯ ಸರ್ಕಾರದ ವತಿಯಿಂದ ರೈತರಿಗೆ ಮೊದಲ ಹಂತದಲ್ಲಿ 1,250 ಕೋಟಿ ರೂಪಾಯಿ ಬರ ಪರಿಹಾರವನ್ನು ನೀಡಲಾಗುತ್ತಿದ್ದು, ಇದರೊಂದಿಗೆ ಕೇಂದ್ರ ಸರ್ಕಾರವೂ ಕೂಡ ಸೂಕ್ತ ನೆರವು ನೀಡಬೇಕು ಹಾಗೂ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಅವರು ಒತ್ತಾಯಿಸಿದರು.

ರೈತರಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ ಮತ್ತು ಸಹಕಾರ ನೀಡುವುದು ಸರ್ಕಾರದ ಬದ್ಧತೆಯಾಗಿದೆ ಎಂದು ತಿಳಿಸಿದರು.

ರೈತ ದಸರಾ ಕಾರ್ಯಕ್ರಮದ ಅಂಗವಾಗಿ 40 ಕೃಷಿ ಮಳಿಗೆಗಳನ್ನು ಉದ್ಘಾಟಿಸಲಾಗಿದ್ದು. ಆಧುನಿಕ ಕೃಷಿ ತಂತ್ರಜ್ಞಾನದ ಕುರಿತು ಸಾಂಸ್ಕೃತಿಕ ತಂಡಗಳು ರೈತರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.

ವಿಶೇಷವಾಗಿ ಹಳ್ಳಿಕಾರ್ ಹಸು ತಳಿ ಪ್ರದರ್ಶನವಿದ್ದು , ಹಾಲು ಕರೆಯುವ ಸ್ಪರ್ಧೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ರೈತರು ಉತ್ಸಾಹದಿಂದ ಭಾಗವಹಿಸಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ “ಹೊನ್ನಾರು” ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಅಲ್ಲದೆ, ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ವಿಜೇತ ರೈತರು ಹಾಗೂ ಜಿಲ್ಲೆಯ ಪ್ರಗತಿಪರ ರೈತ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.ಅನ್ನದಾತರ ಸಬಲೀಕರಣಕ್ಕೆ ಸರ್ಕಾರ ಬದ್ಧ – ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಈ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್. ಬಸವಂತಪ್ಪ, ಪಿ.ಎಂ. ನರೇಂದ್ರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಕೆ. ಶಿವಕುಮಾರ್, ರೈತ ದಸರಾ ಉಪ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಡಿ.ಎಂ, ಕಾರ್ಯಾಧ್ಯಕ್ಷ ಕೆ.ಎಚ್. ರವಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.empowerment jk02_new jk02 new

 

English Summary
Title

Karnataka Government Initiatives: Dr. Yathindra Siddaramaiah on Farmer Empowerment

Short Description
The Karnataka government remains firmly committed to farmer empowerment and sustainable agricultural growth. Highlighting its importance, Karnataka’s Urban Development Minister, Dr. Yathindra Siddaramaiah, emphasized that society cannot survive without the hard work of its farmers (annadatas). To support rural livelihoods, the state is distributing ₹1,250 crore in initial drought relief. Furthermore, the government has adopted a transparent approach to urban planning, implementing clear policies against the forced acquisition of fertile agricultural land to safeguard the economic independence of local communities.
Keywords
Government, empowerment, farmers, Minister, Dr. Yathindra Siddaramaiah