ಬೆಳಗಾವಿಯಲ್ಲಿ ಸಿಎಂ ಬಿಎಸ್ ವೈಗೆ ಪ್ರತಿಭಟನೆ ಬಿಸಿ…

ಬೆಳಗಾವಿ,ಆ,25,2020(www.justkannada.in):   ಉತ್ತರ ಕರ್ನಾಟಕದ ನೆರೆ ಪರಿಹಾರ ಪರಿಸ್ಥಿತಿಯನ್ನ ವೀಕ್ಷಿಸಲು ವೈಮಾನಿಕ ಸಮೀಕ್ಷೆ ನಡೆಸುವ ಸಲುವಾಗಿ ಬೆಳಗಾವಿಗೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪಗೆ ಪ್ರತಿಭಟನೆಯ ಬಿಸಿ ತಟ್ಟಿದೆ.jk-logo-justkannada-logo

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಲು ಬಂದ ರೈತರು ಪ್ರತಿಭಟನೆಗಿಳಿದ ಘಟನೆ ನಡೆಯಿತು.  ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ನೆರೆ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಪರಿಹಾರ ನೀಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲು ರೈತರು ಆಗಮಿಸಿದ್ದರು. ಆದರೆ ರೈತರ ಮನವಿ ಸ್ವೀಕರಿಸದ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ಎದುರೇ ರೈತರು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ ಎನ್ನಲಾಗಿದೆ.farmers-protest-against-cm-bs-yeddyurappa-belagavi

ಕಳೆದ ವರ್ಷ ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಬೆಳೆ ಕಳೆದುಕೊಂಡ ರೈತರಿಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಕೂಡಲೇ ಸಂತ್ರಸ್ತರೆಲ್ಲರಿಗೂ ಪರಿಹಾರ  ನೀಡಬೇಕು ಎಂದು ಪ್ರತಿಭಟನಾನಿರತ ರೈತರು ಆಗ್ರಹಿಸಿದ್ದಾರೆ.

Key words: Farmers -protest –against- CM BS yeddyurappa- Belagavi