ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಮುಂದುವರೆದ ರೈತರ ಹೋರಾಟ: ರಸ್ತೆ ತಡೆಗೆ ಯತ್ನ, ಪ್ರತಿಭಟನೆ

ಬೆಳಗಾವಿ,ನವೆಂಬರ್,7,2025 (www.justkannada.in):  ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು, ರೈತರು ನಡೆಸುತ್ತಿರುವ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದ್ದು,ಪ್ರತಿಭಟನೆಯ ಕಾವು ಹೆಚ್ಚಾಗಿದೆ.

ಬೆಳಗಾವಿ, ಬಾಗಲಕೋಟೆಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ಧಾರವಾಡ-ಗೋಕಾಕ್-ಅಥಣಿ ರಸ್ತೆ ತಡೆ ನಡೆಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.  ಬಾಗಲಕೋಟೆಯ ಲೋಕಾಪುರ ಪಟ್ಟಣದಲ್ಲಿ ರೈತರ ಹೋರಾಟ ಬೆಂಬಲಿಸಿ ವ್ಯಾಪಾರ ವಹಿವಾಟು ಬಂದ್ ಮಾಡಲಾಗಿದೆ.

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಬೆಳಿಗ್ಗೆಯಿಂದಲೇ ರಸ್ತೆಗಿಳಿದು ಹೋರಾಟ ನಡೆಸುತ್ತಿದ್ದು, ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸರ್ಕಾರ ತಕ್ಷಣ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.  ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಕಬ್ಬಿಗೆ ದರ ನಿಗದಿ ಕುರಿತು ಚರ್ಚಿಸಲಿದ್ದಾರೆ.

Key words: Farmers, Protest, continues, sugarcane, price fixing