ರೈತರ ಹಿಂಸಾಚಾರ ಪ್ರಕರಣ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್: ಬಿಗಿ ಭದ್ರತೆ…

ನವದೆಹಲಿ,ಜನವರಿ,27,2021(wwww.justkannada.in):  ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ ರೈತರು ನಡೆಸಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿ ರೈತರು ಕೆಂಪುಕೊಟೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು.jk

. ಗಣರಾಜ್ಯೋತ್ಸವ ದಿನದಂದು ಐತಿಹಾಸಿಕ ಕೆಂಪುಕೋಟೆಗೆ ಮುತ್ತಿಗೆ ಹಾಕಿ, ಅಲ್ಲಿ ಧ್ವಜಾರೋಹಣವನ್ನೂ ಮಾಡಿದರು. ಈ ಹಿನ್ನೆಲೆಯಲ್ಲಿ ಇದೀಗ ದೆಹಲಿಯಲ್ಲಿ ಹೈಅಲರ್ಟ್ ಮಾಡಲಾಗಿದ್ದು ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ದೆಹಲಿಯಾದ್ಯಂತ ಪೊಲೀಸ್ ಹದ್ದಿನ ಕಣ್ಣಿಡಲಾಗಿದ್ದು 15 ಸಿಆರ್ ಪಿಎಫ್ ತುಕಡಿಗಳನ್ನ ನಿಯೋಜಿಸಲಾಗಿದೆ.  ಜತೆಗೆ ಭದ್ರತೆಗಾಗಿ 15 ಸಾವಿರ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Farmers-protest-High Alert – Delhi-redfort
ಕೃಪೆ- internet

ಕೃಷಿ ತಿದ್ದುಪಡಿ ಕಾಯ್ದೆಗಳನ್ನ ಹಿಂಪಡೆಯುವಂತೆ ಆಗ್ರಹಿಸಿ ನಿನ್ನೆ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ನಡೆದು ಹಲವು ಮಂದಿಗೆ ಗಾಯಗಳಾಗಿದೆ.  ಇನ್ನು ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆ ಸುತ್ತಮುತ್ತ ಭಾರಿ ಭದ್ರತೆಯನ್ನು ಕಲ್ಪಿಸಲಾಗಿದೆ.

Key words: Farmers-protest-High Alert – Delhi-redfort