ರೈತರ ಪ್ರತಿಭಟನೆಗೆ ಬೆಂಬಲ:  ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ

ಬೆಳಗಾವಿ,ನವೆಂಬರ್,5,2025 (www.justkannada.in):  ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರಾಜ್ಯದ ಹಲವು ಕಡೆಗಳಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಈ ನಡುವೆ ಬೆಳಗಾವಿಯಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಹೆದ್ದಾರಿ ತಡೆದು ಧರಣಿ ನಡೆಸಿದೆ.

ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಬೆಂಬಲ ನೀಡಿದ್ದು,  ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾರಿಗಳನ್ನು ನಿಲ್ಲಿಸಿ, ಲಾರಿ ಏರಿ  ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಹೆದ್ದಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸರ್ಕಾರ ಕೂಡಲೇ ಟನ್ ಕಬ್ಬಿಗೆ 3500 ರೂಪಾಯಿ  ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Key words: Support, farmers, protest, Karave, blocking, highway