ರೈತರ ಹೋರಾಟ ಉದ್ವಿಗ್ನ: ಲಾಠಿಚಾರ್ಜ್, ಪೊಲೀಸರ ವಾಹನ ಮೇಲೆ ಕಲ್ಲು ತೂರಾಟ

ಬೆಳಗಾವಿ,ನವೆಂಬರ್,7,2025 (www.justkannada.in):  ಟನ್ ಕಬ್ಬಿಗೆ 3500 ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕಳೆದ 9 ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದ್ದು ಈ ನಡುವೆ  ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹತ್ತರಗಿ  ಬಳಿ ರಸ್ತೆ ಬಂದ್ ಮಾಡಿ ಪ್ರತಿಭಟನಾಕಾರರು ಪ್ರತಿಭಟನೆಗೆ  ಮುಂದಾಗಿದ್ದು ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಚಾರ್ಜ್ ಹಿನ್ನೆಲೆಯಲ್ಲಿ ಸಿಡಿದ ರೈತರು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಈ ನಡುವೆ ಹತ್ತರಗಿ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇತ್ತ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ಅಂತ್ಯವಾಗಿದೆ.

Key words: Farmers, protest, Lathi charge, stones pelt