ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಶರಣು.

ಬೆಳಗಾವಿ,ಅಕ್ಟೋಬರ್,23,2021(www.justkannada.in): ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ತಾಲ್ಲೂಕಿನ ಬೋರಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಂದೆ ಗೋಪಾಲ ಹಾದಿಮನಿ(46), ಮಕ್ಕಳಾದ ಸೌಮ್ಯ ಹಾದಿಮನಿ(19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ(11) ಹಾಗೂ ಸೃಜನ ಹಾದಿಮನಿ ( 8) ಮೃತಪಟ್ಟವರು.

ಗೋಪಾಲ ಹಾದಿಮನಿ  ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಪಾಲ್ ಹಾದಿಮನಿ ಪತ್ನಿ ಜಯಾ ಅವರು ಬ್ಲಾಕ್ ಫಂಗಸ್ ನಿಂದಾಗಿ ಮೃತಪಟ್ಟಿದ್ದರು. ಇದರಿಂದ ಮಾನಸಿಕವಾಗಿ ಮನನೊಂದಿದ್ದ ಗೋಪಾಲ್ ಹಾದಿಮನಿ ನೀರಿನಲ್ಲಿ ವಿಷ ಬೆರಸಿ ಮಕ್ಕಳಿಗೆ ನೀಡಿ ಬಳಿಕ ತಾವೂ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸಂಕೇಶ್ವರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Father -commits -suicide –poisoning- four children-belgavi