ಇಬ್ಬರು ಪುಟ್ಟಮಕ್ಕಳನ್ನ ಸುತ್ತಿಗೆಯಿಂದ ಹೊಡೆದು ಕೊಂದ ತಂದೆ..

ಮಂಡ್ಯ,ಜೂನ್,22,2023(www.justkannada.in): ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.

ಆದಿತ್ಯ(3) ಹಾಗೂ ಅಮೂಲ್ಯ(4) ತಂದೆಯಿಂದಲೇ ಹತ್ಯೆಯಾದ ಮಕ್ಕಳು. ಶ್ರೀಕಾಂತ್ ಎಂಬ ವ್ಯಕ್ತಿಯೇ ತನ್ನಿಬ್ಬರ ಮಕ್ಕಳನ್ನ ಕೊಂದಿರುವ ತಂದೆ. ಅಲ್ಲದೇ ತನ್ನ ಪತ್ನಿ ಲಕ್ಷ್ಮೀಗೂ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ.

ಕಲಬುರಗಿ ಜಿಲ್ಲೆ ಜೇವರ್ಗಿಯಿಂದ ಬಂದು ಮರಳಗಾಲದ ಆಲೆಮನೆಯಲ್ಲಿ ಈ ಕುಟುಂಬ ಕೆಲಸ ಮಾಡುತ್ತಿತ್ತು. ಇಂದು ಮುಂಜಾನೆ 4 ಗಂಟೆಯ ವೇಳೆ ಮಕ್ಕಳನ್ನು ಕೊಂದು ಪತ್ನಿ ಮೇಲೆ ಹಲ್ಲೆ ನಡೆಸಿ ಶ್ರೀಕಾಂತ್ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಲಕ್ಷ್ಮೀಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ  ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Father -killed -two little -children – hammer.