Tuesday, August 18, 2026

BDA Apartments

Home Crime ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ: 12 ಮಂದಿ ವಶಕ್ಕೆ  ಪಡೆದು ವಿಚಾರಣೆ.

ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ: 12 ಮಂದಿ ವಶಕ್ಕೆ  ಪಡೆದು ವಿಚಾರಣೆ.

ದಕ್ಷಿಣ ಕನ್ನಡ, ಜುಲೈ 29,2022(www.justkannada.in): ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮತ್ತೊಬ್ಬ ಯುವಕನ ಹತ್ಯೆ ಜನರನ್ನ ಬೆಚ್ಚಿಬೀಳಿಸಿದೆ. ಮಂಗಳೂರು ಹೊರವಲಯದಲ್ಲಿರುವ ಸುರತ್ಕಲ್‌ ನಲ್ಲಿ  ನಿನ್ನೆ ದುಷ್ಕರ್ಮಿಗಳು ಫಾಜಿಲ್​ ಮಂಗಲಪೇಟೆ (23)  ಎಂಬ ಯುವಕನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇನ್ನು ಪಣಂಬೂರು, ಬಜ್ಪೆ, ಮುಲ್ಕಿ ಸುತ್ತಮುತ್ತಲ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಪ್ರಕರಣ ಸಂಬಂಧ 12 ಮಂದಿ  ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರಾತ್ರಿ 10 ಗಂಟೆ ಬಳಿಕ ಯಾರೂ ಓಡಾಡಬೇಡಿ. ಅನಾವಶ್ಯಕವಾಗಿ ಏನನ್ನು ಪೋಸ್ಟ್ ಹಾಕಬೇಡಿ.  ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಆದ್ಯತೆ. ಹೀಗಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ.  ಯಾರೂ ವಂದತಿಗಳಿಗೆ ಕಿವಿಕೊಡಬೇಡಿ  ಎಂದು ಮನವಿ ಮಾಡಿದ್ದಾರೆ.

Key words: Fazil –murder- case – Suratkal- 12 arrested