Wednesday, July 29, 2026

BDA Apartments

Home Front Page ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಬಂಧನದ ಭೀತಿ

ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಬಂಧನದ ಭೀತಿ

ನವದೆಹಲಿ, ಸೆಪ್ಟೆಂಬರ್ 03, 2019 (www.justkannada.in): ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿಗೆ ಸಂಕಷ್ಟ ಎದುರಾಗಿದೆ.

ಸದ್ಯ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಿರುವ ಶಮಿಗೆ ಕೋರ್ಟ್ ಬಂಧನದ ವಾರೆಂಟ್ ಜಾರಿ ಮಾಡಿದೆ.

ಮೊಹಮ್ಮದ್ ಶಮಿ ಅವರ ವಿರುದ್ಧ ಪತ್ನಿ ಹಸೀನ್ ಜಹಾನ್ 2018ರಲ್ಲಿ ದಾಖಲಿಸಿರುವ ವರದಕ್ಷಿಣೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ಅಲಿಪೋರ್ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.