ಕೊರೋನಾ ವಿರುದ್ಧ ಹೋರಾಟ:  ಸ್ವಯಂ ಸೇವಕರಾಗಿ ಕೆಲಸ ಮಾಡಲು ನೋಂದಾಯಿಸಿಕೊಳ್ಳಿ-ಟ್ವೀಟ್ ಮೂಲಕ ಸಿಎಂ ಬಿಎಸ್ ವೈ ಮನವಿ…

ಬೆಂಗಳೂರು,ಜೂ,25,2020(www.justkannada.in):  ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಅದರಲ್ಲು ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ರಣಕೇಕೆ ಹಾಕುತ್ತಿದೆ. ಹೀಗಾಗಿ ಕೊರೋನಾ ವಿರುದ್ದ ಹೋರಾಡಲು ಸರ್ಕಾರದ ಜತೆ ಕೈ ಜೋಡಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು ಎಂದು ಬೆಂಗಳೂರು ಜನತೆಯಲ್ಲಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.fight-against-corona-register-volunteer-cm-bs-yeddyurappa

ಸರ್ಕಾರದ ಹೋರಾಟದೊಂದಿಗೆ ಜತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು.. ಬಿಬಿಎಂಪಿಯ ನಾಗರೀಕ ಕ್ವಾರಂಟೈನ್ ಸ್ಕ್ವಾಡ್ ಸದಸ್ಯರಾಗಲು ಈ https://register.quarantinesquad.in/#/p/register  ಲಿಂಕ್ ಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನ  ನೋಂದಾಯಿಸಿಕೊಳ್ಳಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Key words: fight –against- Corona-Register – volunteer-CM BS yeddyurappa