Thursday, August 6, 2026

BDA Apartments

Home Crime ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲು

ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲು

ಮೈಸೂರು,ಸೆಪ್ಟಂಬರ್,25,2024 (www.justkannada.in):  ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಅರ್ಜಿದಾರ ಪ್ರದೀಪ್ ಕುಮಾರ್ ಅವರಿಂದ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ದೂರು ದಾಖಲಿಸಲು ಮೈಸೂರಿನ‌ ಕಚೇರಿಗೆ ಬಂದ ದೂರುದಾರ ಪ್ರದೀಪ್ ಕುಮಾರ್   ಮೈಸೂರು ಲೋಕಾಯುಕ್ತ ಎಸ್ ಪಿ ಸುದೇಶ್ ಅವರಿಗೆ ಕೋರ್ಟ್ ಆದೇಶದ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ದ  ದೂರು ದಾಖಲಿಸಬೇಕೆಂದು ಮನವಿ ಮಾಡಿದ್ದಾರೆ.

ಇದೀಗ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಾಗಿದೆ. ನಿನ್ನೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿತ್ತು. ಈ ಬೆನ್ನಲ್ಲೆ ಇದೀಗ ದೂರುದಾರ ಪ್ರದೀಪ್ ನೇತೃತ್ವದಲ್ಲಿ ಪ್ರಕರಣ ದಾಖಲಿಸಲಾಗಿದೆ.

Key words: File, complaint, against, CM Siddaramaiah, Mysore Lokayukta