ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ: ಸರ್ಕಾರ ವಿರುದ್ದ ಇಂದು ಬೃಹತ್ ಹೋರಾಟ

ಧಾರವಾಡ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ ಸುಮಾರು 2.80 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದರೂ ಕಳೆದ ಮೂರು ವರ್ಷಗಳಿಂದ ಸರಿಯಾಗಿ ನೇಮಕಾತಿ ಮಾಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಹೆಚ್ಚಾಗಿದ್ದು  ಇಂದು ಧಾರವಾಡದಲ್ಲಿ ಬೃಹತ್ ಹೋರಾಟ ನಡೆಯುತ್ತಿದೆ.

ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರ ನೇತೃತ್ವದಲ್ಲಿ ಇಂದು ಧಾರವಾಡದ  ಶ್ರೀನಗರ ವೃತ್ತದಿಂದ  ಪ್ರತಿಭಟನಾ ರ್ಯಾಲಿ ನಡೆಯಲಿದೆ. ಪ್ರತಿಭಟನಾ ಬಳಿಕ ಮಿಚಿಗನ್ ಕಾಂಪೌಂಡ್ ಮೈದಾನದಲ್ಲಿ ಸಭೆ ನಡೆಯಲಿದೆ.

ಹೋರಾಟದಲ್ಲಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ , ಅರವಿಂದ ಬೆಲ್ಲದ್ ಸೇರಿ ಹಲವರು ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ನಾಯಕರಿಗೆ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸಾಥ್ ನೀಡಲಿದ್ದು ಬೃಹತ್ ಹೋರಾಟ ಹಿನ್ನೆಲೆಯಲ್ಲಿ ಧಾರವಾಡ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Key words: filling ,vacant, posts, Massive, protest, against ,government