ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ವಿರುದ್ಧದ ಎಫ್ ಐಆರ್ ರದ್ದುಗೊಳಿಸಿ ಹೈಕೋರ್ಟ್ ತೀರ್ಪು.

ಧಾರವಾಡ,ಆಗಸ್ಟ್,7,2023(www.justkannada.in):  ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಿಸಲಾಗಿದ್ದ ಎಫ್​ಐಆರ್​ ಅನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್​​ನ ತೀರ್ಪು ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪನಹಳ್ಳಿ ಠಾಣೆಯಲ್ಲಿ ಜೆಪಿ ನಡ್ಡಾ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. 2023ರ ಮೇ 7ರಂದು ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ್ದ ನಡ್ಡಾ ವಿರುದ್ಧ ಪೊಲೀಸರು ಮೇ 11ರಂದು ಸ್ವಯಂ ಪ್ರೇರಿತರಾಗಿ ಎಫ್‌ಐಆರ್  ದಾಖಲಿಸಿದ್ದರು.

ಎಫ್ ಐಆರ್ ರದ್ದುಗೊಳಿಸುವಂತೆ ಮನವಿ ಮಾಡಿ ಜೆಪಿ ನಡ್ಡಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್  ಏಕಸದಸ್ಯ ಪೀಠ, ಎಫ್​ಐಆರ್​​ ರದ್ದುಗೊಳಿಸಿ ತೀರ್ಪು ನೀಡಿದೆ. ಜುಲೈ 8ರಂದು ನಡ್ಡಾ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ನಂತರ ಜುಲೈ 21ಕ್ಕೆ ವಿಚಾರಣೆ ನಡೆಸಿತ್ತು.

Key words: FIR- cancel-against -BJP President -JP Nadda